ತೆಲಂಗಾಣದ ಜಹೀರಾಬಾದ್ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಬೀದರ್ ಜಿಲ್ಲೆ ಔರಾದ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಅವಿನಾಶ್ ಗೋಡೆ (27) ಹಾಗೂ ಬೀದರ್ ನಗರದ ಗುಂಪಾ ನಿವಾಸಿ ವೀರೇಶ (30) ಎಂಬ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬೀದರ್‌ನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರೂ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಇಪಿಎಸ್ ನಾಯಕರ ವಿರುದ್ಧ ದೆಹಲಿ ಪೊಲೀಸರ ದಬ್ಬಾಳಿಕೆ; ನೌಕರರ ಭವಿಷ್ಯ ನಿಧಿ ಸಂಸ್ಥೆ ಖಂಡನೆ
ಮೃತದೇಹವನ್ನು ಜಹೀರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಕುರಿತು ಜಹೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




