ಬಾಗೇಪಲ್ಲಿ | ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ

Date:

ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಿಸುವಾಗ ಹೆಲ್ಮೆಟ್‌ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ರಂಗನಾಥ್ ಹೇಳಿದರು.

ಬಾಗೇಪಲ್ಲಿ ಪಟ್ಟಣದಲ್ಲಿ ಗುರುವಾರ ಶಿಕ್ಷಣ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಂಚಾರಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬದವರನ್ನು ಮತ್ತು ತಮ್ಮ ಜವಾಬ್ದಾರಿಯನ್ನು ಅರಿತು ವಾಹನ ಚಲಿಸಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮದ್ಯಸೇವಿಸಿ ವಾಹನ ಚಾಲನೆ ಮಾಡುವುದು, ವಾಹನ ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡುವುದು ಅಪಘಾತಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಡಿ.ವಿ.ಜಿ. ಮುಖ್ಯ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ವಾಹನ ಸವಾರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ ವರ್ಗ ಮತ್ತು ಪೊಲೀಸ್‌ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...