ಧಾರವಾಡ-ಹುಬ್ಬಳ್ಳಿ | ಚೌತಿ, ಮೀಲಾದುನ್ನಬಿ: ರೌಡಿಶೀಟರ್‌ಗಳ ಪರೇಡ್ ನಡೆಸಿದ ಕಮಿಷನರ್ ಶಶಿಕುಮಾರ್

Date:

ಹುಬ್ಬಳ್ಳಿ ಧಾರವಾಡ ನಗರ ವ್ಯಾಪ್ತಿಯಲ್ಲಿ ಮುಂಬರುವ ಗಣೇಶ ಚತುರ್ಥಿ ಮತ್ತು ಮೀಲಾದುನ್ನಬಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕರ ಶಾಂತಿ, ಸುರಕ್ಷತೆ ಮತ್ತು ಭದ್ರತೆ ಸೇರಿದಂತೆ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ರೌಡಿಶೀಟರ್‌ಗಳ ಪರೇಡ್‌ ನಡೆಯಿತು.

ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಎಲ್ಲ ಪೊಲಿಸ್ ಠಾಣೆಗಳ ರೌಡಿಶೀಟರ್‌ಗಳ ಪರೇಡ್ ನಡೆಸಿ ಮುಂಬರುವ ಗಣೇಶ ಚತುರ್ಥಿ ಹಾಗೂ ಮೀಲಾದುನ್ನಬಿ ಹಬ್ಬದಲ್ಲಿ ಶಾಂತಿ ಸುರಕ್ಷತೆ ಉಂಟು ಮಾಡುವ ಉದ್ದೇಶದಿಂದ ಶಾಂತಿ ಕದಡದಂತೆ ರೌಡಿಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

WhatsApp Image 2024 09 02 at 4.26.51 PM

ಈ ಪರೇಡ್‌ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಒಟ್ಟು 862 ಜನ ರೌಡಿಶೀಟರ್ ಹಾಜರಾಗಿದ್ದರು ಮತ್ತು ಒಟ್ಟು 8 ರೌಡಿಶೀಟರ್ ಗಳನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. 295 ರೌಡಿಶೀಟರ್‌ಗಳ ವಿರುದ್ಧ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

15 ಜನ ರೌಡಿಶೀಟರ್‌ಗಳ ವಾರೆಂಟ್ ಇರುತ್ತವೆ. ಈಗಾಗಲೇ ಎಲ್ಲ ರೌಡಿಶೀಟರ್‌ಗಳ ಮೇಲೆ ನಿಗಾ ವಹಿಸಿದ್ದು ಸಾರ್ವಜನಿಕರ ಶಾಂತಿ ನೆಮ್ಮದಿ ಮತ್ತು ಕಾನೂನು ಸುವ್ಯವಸ್ಥೆ ಹಾಳು ಮಾಡುವಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಹಾಸನ | ಲಂಚ ಪಡೆದಿದ್ದ ಅಪರಾಧ ಸಾಬೀತು: ಸರ್ಕಾರಿ ಕೆಲಸದಿಂದ ಉಪ ನೋಂದಣಾಧಿಕಾರಿ ವಜಾ

ಒಂದು ವೇಳೆ ಅಂತಹ ಚಟುವಟಿಕೆಗಳಲ್ಲಿ ತೊಡಗಿದ್ದರ ಬಗ್ಗೆ ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರೌಡಿಸಂ ಚಟುವಟಿಕೆಗಳನ್ನು ಬಿಟ್ಟು ಮುಖ್ಯವಾಹಿನಿಗೆ ಬಂದು ಸುಧಾರಣೆ ಆಗುತ್ತೇವೆಂದು ಮನವಿ ನೀಡಿದವರ ಬಗ್ಗೆ ಪರಿಶೀಲನೆ‌ ಮಾಡುತ್ತೇವೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...