ರೌಡಿಶೀಟರ್ ಹತ್ಯೆ ಹಿನ್ನೆಲೆ: ಸಂಘಪರಿವಾರದಿಂದ ಶುಕ್ರವಾರ ದ.ಕ. ಜಿಲ್ಲಾ ಬಂದ್‌ಗೆ ಕರೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬಾತನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಈ ಬೆನ್ನಲ್ಲೇ ಶುಕ್ರವಾರ ಸಂಘಪರಿವಾರವು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ ನೀಡಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, “ಇದು ಪೂರ್ವಯೋಜಿತ ಕೊಲೆ ಮತ್ತು ಇದರ ಹಿಂದೆ ನಿಷೇದಿತ, ಉಗ್ರವಾದಿ ಸಂಘಟನೆ ಪಿಎಫ್‌ಐನ ನೇರವಾದ ಕೈವಾಡವಿದೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕೊಲೆಯನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಎಲ್ಲಾ ಹಿಂದೂ ಸಂಘಟನೆಗಳು ಬಹಳ ಬಲವಾಗಿ ಇದನ್ನು ಖಂಡಿಸುತ್ತದೆ. ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಇನ್ನು ಈ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನು ಅಲ್ಲಲ್ಲಿ ಕಲ್ಲು ತೂರಾಟ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಆದರೆ ಪೊಲೀಸರು ಈ ಬಗ್ಗೆ ಯಾವುದೇ ದೃಢೀಕರಣ ನೀಡಿಲ್ಲ.

ಈ ಬಗ್ಗೆ ಈದಿನ ಡಾಟ್‌ ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಆಟೋ ಚಾಲಕರೊಬ್ಬರು, “ಯಾವುದೇ ಬಸ್‌ಗಳು ಓಡಾಡುತ್ತಿಲ್ಲ. ಹಾಗಾಗಿ ಎಲ್ಲಾ ಪ್ರಯಾಣಿಕರು ಆಟೋ ಮೇಲೆ ಅವಲಂಭಿಸಿದ್ದಾರೆ. ಅಲ್ಲಲ್ಲಿ ಕಲ್ಲು ತೂರಾಟ ನಡೆದಿದೆ. ಮಧ್ಯಾಹ್ನದವರೆಗೂ ಆಟೋ ಓಡಾಟಕ್ಕೆ ಅವಕಾಶ ಸಿಗಬಹುದು ಎನ್ನಲಾಗಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...