ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: 5ಕ್ಕೂ ಹೆಚ್ಚು ಆರೋಪಿಗಳು ಪೊಲೀಸ್ ವಶಕ್ಕೆ?

Date:

ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ‌ ಗುಂಪಿನಿಂದ ಕೊಲೆಗೀಡಾದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 5ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹಿಂದೂಗಳು ಕೂಡ ಭಾಗಿಯಾಗಿರುವುದಾಗಿ ಬೆಳಕಿಗೆ ಬಂದಿದೆ ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ‌.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರ ತಂಡ ಈಗಾಗಲೇ ಐದಕ್ಕೂ ಅಧಿಕ ಮಂದಿ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಇಬ್ಬರು ಹಿಂದೂಗಳು ಇದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಹಾಸ್‌ ಶೆಟ್ಟಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಹೊರ ಜಿಲ್ಲೆಯ ಇಬ್ಬರು ಹಿಂದೂಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತರು ಅಪರಾಧ ಹಿನ್ನೆಲೆಯವರು ಎನ್ನಲಾಗುತ್ತಿದೆ.

ಮತೀಯ ಕಾರಣಕ್ಕೆ ಸುಹಾಸ್ ಶೆಟ್ಟಿ ಕೊಲೆ ನಡೆದಿದೆ ಎಂದು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಆರೋಪಿಸಿದ್ದರು.

ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎಂಬ ಅನುಮಾನಗಳು ವ್ಯಕ್ತವಾಗಿತ್ತು. ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ ವೇಳೆ ಮುಸ್ಲಿಮರಿಗೆ ಚೂರಿ ಇರಿತ ಆಗಿದ್ದು, ಮುಸ್ಲಿಮರ ಮೇಲೆ ಹಲ್ಲೆ ನಡೆದಿರುವುದು ವರದಿಯಾಗಿದೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿಂದೂಗಳ ಬಂಧನ ನಡೆದಿದೆ ಎಂದು ತಿಳಿದುಬಂದಿದ್ದು, ಕೊಲೆ ಕೃತ್ಯಕ್ಕೆ ಬೇರೆ ಆಯಾಮ ಇದೆ ಎನ್ನಲಾಗುತ್ತಿದೆ. ಅಪರಾಧ ಜಗತ್ತಿನ ವೈಯಕ್ತಿಕ ದ್ವೇಷದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ. ರೌಡಿಶೀಟರ್ ಸುಹಾಸ್‌ ಶೆಟ್ಟಿ ಗ್ಯಾಂಗ್‌ವಾರ್‌ಗೆ ಬಲಿಯಾಗಿರುವ ಅನುಮಾನ ವ್ಯಕ್ತವಾಗಿದೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಪೊಲೀಸರು ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲ. ಮಂಗಳೂರು ನಗರ ಪೊಲೀಸ್‌ ಆಯುಕ್ತರು ಶೀಘ್ರದಲ್ಲಿಯೇ ಈ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

”ವೈಯಕ್ತಿಕವಾದ ದ್ವೇಷಕ್ಕಾಗಿ ನಡೆದಿರುವ ಘಟನೆ” ಎಂದಿದ್ದ ಸ್ಪೀಕರ್ ಯು ಟಿ ಖಾದರ್

ಫಾಝಿಲ್ ತಂದೆ ಹಾಗೂ ಸಹೋದರರು ಮಾತನಾಡಿದ್ದಾರೆ. ಸುಹಾಸ್ ಕೊಲೆಗೂ ನಮಗೂ ಯಾವುದೇ ಸಂಬಂಧ ಇಲ್ಲ ನಮಗೂ ಈ ಕೃತ್ಯಕ್ಕೂ ಯಾವುದೇ ಸಂಬಂಧ ಇಲ್ಲ. ಇಂತಹ ಪ್ರತಿಕಾರದ ಆಲೋಚನೆಯನ್ನು ನಾವು ಮಾಡಿಯೂ ಇಲ್ಲ. ನಾವು ಎಲ್ಲವನ್ನೂ ಅಂದೇ ದೇವರ ಪಾಲಿಗೆ ಬಿಟ್ಟಿದ್ದೇವೆ ಎಂದಿದ್ದಾರೆ ಎಂದು ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.

WhatsApp Image 2025 05 02 at 4.44.07 PM

“ಇದೆಲ್ಲವೂ ವೈಯಕ್ತಿಕವಾದ ದ್ವೇಷಕ್ಕಾಗಿ ನಡೆದಿರುವ ಘಟನೆಯಾಗಿದೆ. ಧರ್ಮ ಧರ್ಮದ ದ್ವೇಷ ಅಲ್ಲ” ಇದು ಎಂದು ಯುಟಿ ಖಾದ‌ರ್ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...