ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ರೂ.10 ಸಾವಿರ ಕೋಟಿ : ಗೃಹ ಸಚಿವ ಡಾ.ಜಿ.ಪರಮೇಶ್ವರ

Date:

ತುಮಕೂರು  ಜಿಲ್ಲೆಯಲ್ಲಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು. 

ಶನಿವಾರ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜತೆ ಜತೆಯಲ್ಲಿಯೇ ರಾಜ್ಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಅಂತೆಯೇ ತುಮಕೂರು ಜಿಲ್ಲೆಯಲ್ಲಿ ಸುಮಾರು 10 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಕನ್ನಡದ ನೆಲ ಮತ್ತು ಜಲ ಸಂರಕ್ಷಣೆ ಸರ್ಕಾರದ ಆದ್ಯತೆಯಾಗಿದೆ ಎಂದ ಅವರು, ಕೆಲವು ಕಟ್ಟಡಗಳ ನಿರ್ಮಾಣ ಕಾರ್ಯ ಕುಂಠಿತವಾಗಿದ್ದ ಹಿನ್ನೆಲೆಯಲ್ಲಿ ಉದ್ಘಾಟನೆಗೆ ತಡವಾಗಿದ್ದ ತುಮಕೂರು ನಗರದ ಬಿದರಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವ ವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸನ್ನು ನವೆಂಬರ್ 7ರಂದು ರಾಜ್ಯಪಾಲರು ಉದ್ಘಾಟಿಸಲಿದ್ದಾರೆ. ಅಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಜಿಲ್ಲಾಸ್ಪತ್ರೆ ಆವರಣದಲ್ಲಿ 66 ಕೋಟಿ ವೆಚ್ಚದಲ್ಲಿ 100 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣವಾಗಿರುವ ಕಟ್ಟಡ, 22 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಹಾಗೂ 42 ಕೋಟಿ ವೆಚ್ಚದಲ್ಲಿ ತುರ್ತು ನಿಗಾ ಘಟಕ, 78 ವರ್ಷದ ಹಳೆಯ ಜಿಲ್ಲಾ ಆಸ್ಪತ್ರೆ ಕಟ್ಟಡ ಶಿಥಿಲವಾಗಿರುವುದರಿಂದ 130 ಕೋಟಿ ವೆಚ್ಚದಲ್ಲಿ ಆಧುನಿಕ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ, 29 ಕೋಟಿ ವೆಚ್ಚದಲ್ಲಿ ಭೀಮಸಂದ್ರದ ಬಳಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಹಾಗೂ 130 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 3ನೇ ಹಂತದ ಶುದ್ಧೀಕರಣ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನವೆಂಬರ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು. 

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 169 ಕೋಟಿ ರೂ. ಮಂಜೂರಾಗಿದ್ದು, ಚರಂಡಿ, ರಸ್ತೆ ಮತ್ತು ಉದ್ಯಾನವನ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ನಗರ ಒಳಚರಂಡಿ ದುರಸ್ತಿಗೆ 50 ಕೋಟಿ ರೂ. ಮಂಜೂರಾಗಿದ್ದು, ದಿಬ್ಬೂರು ಮತ್ತು ದೋಬಿಘಾಟ್ ಬಳಿ ಎರಡು ಆರೋಗ್ಯ ಕೇಂದ್ರಗಳಿಗೆ 2 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.

ಅಲ್ಲದೆ ಜಿಲ್ಲೆಯ ಪ್ರತಿ ತಾಲ್ಲೂಕಿಗೆ 300 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ, ಚರಂಡಿ ಮತ್ತು ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದ ಅವರು ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಆರೋಪಗಳಿಗೆ ಈ ಎಲ್ಲ ಕಾಮಗಾರಿಗಳು ನಿದರ್ಶನವಾಗಿವೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...