ಬಿಪಿಎಲ್ ಕಾರ್ಡ್ ಹೊಂದಿದ್ದ 21 ಸಾವಿರ ಸರ್ಕಾರಿ ನೌಕರರಿಗೆ 11 ಕೋಟಿ ರೂ. ದಂಡ

Date:

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡ ಸಂಗ್ರಹಿಸಿದೆ. ವಿಪರ್ಯಾಸವೆಂದರೆ, 21,232 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದು, ಅವರಿಗೆ 11.2 ಕೋಟಿ ರೂ. ದಂಡ ವಿಧಿಸಲಾಗಿದೆ ಎಂದು ಇಲಾಖೆ ಹೇಳಿದೆ.

ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ ಹೊಂದ್ದಿದ್ದವರನ್ನು ಪತ್ತೆಹಚ್ಚುವ ಅಭಿಯಾನವು ಫೆಬ್ರವರಿ 2021 ರಿಂದ ಆರಂಭವಾಗಿದೆ. ಆಧಾರ್ ಸಂಖ್ಯೆಗಳನ್ನು ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಅಂಕಿಅಂಶಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಇಲಾಖೆಯ ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹೇಳಿದ್ದಾರೆ.

“ನಾವು ಸಾರಿಗೆ ಇಲಾಖೆಯ ನೆರವನ್ನೂ ಪಡೆದಿದ್ದೇವೆ. 12,583 ಬಿಪಿಎಲ್ ಫಲಾನುಭವಿಗಳು ಐಷಾರಾಮಿ ನಾಲ್ಕು-ಚಕ್ರದ ವಾಹನಗಳನ್ನು ಹೊಂದಿದ್ದಾರೆ. ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ 2.9 ಲಕ್ಷ ರೈತರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿದ್ದಾರೆ ಎಂಬುದು ಪತ್ತೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದಾಯ ತೆರಿಗೆ ಇಲಾಖೆಯ ನೆರವಿನಿಂದ ವಾರ್ಷಿಕ 1.2 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ 50,000 ಜನರನ್ನು ಪತ್ತೆಹಚ್ಚಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೈಸೂರು | ಕರ್ತವ್ಯಲೋಪ ಆರೋಪ; ಇಬ್ಬರು ಶಿಕ್ಷಕರು ಅಮಾನತು

“ಸರ್ಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಹೊಂದಿರುವುದು ಇದೇ ಮೊದಲ ಬಾರಿಗೆ ಪತ್ತೆಯಾಗಿದೆ. ಹೀಗಾಗಿ, ಅವರಿಗೆ ಭಾರೀ ಮೊತ್ತದ ದಂಡವನ್ನಷ್ಟೇ ವಿಧಿಸಿದ್ದೇವೆ. ಅಂತಹ 21,232 ನೌಕರರ ಪೈಕಿ 17,521 ಮಂದಿ ಈಗಾಗಲೇ ತಮ್ಮ ಪಡಿತರ ಚೀಟಿಯನ್ನು ಎಪಿಎಲ್ ಕಾರ್ಡ್‌ಗೆ ಪರಿವರ್ತಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ದಂಡವನ್ನು ವಿಧಿಸುವಾಗ, ನಾವು ಅವರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿದ್ದೇವೆ. ಆದ್ದರಿಂದ, ಸರ್ಕಾರಿ ಸಿಬ್ಬಂದಿಗಳಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...