ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ ವದಂತಿ: ಅಧಿಕಾರಿಗಳ ಸ್ಪಷ್ಟನೆ

Date:

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ವಿತರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಪಡಿತರದಾರರಿಗೆ ವಿತರಿಸಲಾಗುತ್ತಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಮಿಶ್ರಣ ಮಾಡಲಾಗುತ್ತಿದೆ ಎಂಬ ವದಂತಿಗಳೂ ಹರಿದಾಡುತ್ತಿದ್ದು, ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂಬುದು ಸುಳ್ಳು ಎಂದು ಹೇಳಿದ್ದಾರೆ.

ಈ ಬಗ್ಗೆ ರಾಮನಗರ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. “ಪಡಿತರದಾರರಿಗೆ ಮಾಮೂಲಿ ಅಕ್ಕಿಯ ಜೊತೆಗೆ ಪೌಷ್ಠಿಕಾಂಶಯುಕ್ತ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಸಾರವರ್ಧಿತ ಅಕ್ಕಿಯಲ್ಲಿ ಆರೋಗ್ಯಕ್ಕೆ ಅಗತ್ಯವಿರುವ ಜೀವಸತ್ವಗಳು ಮತ್ತು ಕಬ್ಬಿಣಾಂಶ, ಫೋಲಿಕ್ ಆಮ್ಲ ಹಾಗೂ ವಿಟಮಿನ್ ಬಿ ನಂತಹ ಪೋಷಕಾಂಶಗಳನ್ನು ಸೇರಿಸಲಾಗಿರುತ್ತದೆ. ಆದರೆ, ಈ ಅಕ್ಕಿಯನ್ನು ಕೆಲವರು ಪ್ಲಾಸ್ಟಿಕ್ ಅಕ್ಕಿಯೆಂದು ಬಿಂಬಿಸಿ, ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ಕ್ವಿಂಟಾಲ್‌ ಮಾಮೂಲಿ ಅಕ್ಕಿಗೆ 1 ಕೆ.ಜಿ ಸಾರವರ್ಧಿತ ಅಕ್ಕಿಯನ್ನು ಸೇರಿಸಲಾಗುತ್ತದೆ. ಈ ಅಕ್ಕಿ, ಮಾಮೂಲಿ ಅಕ್ಕಿಗಿಂತ ಭಿನ್ನವಾಗಿ ಕಾಣಿಸುತ್ತದೆ. ಇದನ್ನೇ ನೆಪವಾಗಿಟ್ಟುಕೊಂಡು ಸುಳ್ಳು ವದಂತಿ ಹಬ್ಬಿಸಲಾಗುತ್ತಿದೆ. ಅಂತಹ ವದಂತಿಗಳನ್ನು ಜನರು ನಂಬಬಾರದು” ಎಂದು ಅವರು ತಿಳಿಸಿದ್ದಾರೆ.

“ಸಾರವರ್ಧಿತ ಅಕ್ಕಿಯ ಸೇವನೆಯು ರಕ್ತಹೀನತೆ ಮತ್ತು ಅಪೌಷ್ಠಿಕತೆಯನ್ನು ಹೋಗಲಾಡಿಸುತ್ತದೆ. ಸರ್ಕಾರ ಪಡಿತರ ಚೀಟಿದಾರರಿಗೆ ವಿತರಿಸುತ್ತಿರುವ ಈ ಅಕ್ಕಿಯನ್ನು ನಿರ್ಭೀತಿಯಿಂದ ಬಳಸಬಹುದು” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...