ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಉಡುಪಿ ಮೂಲದ ರೂಪಾ ಬಲ್ಲಾಳ್ ಆಯ್ಕೆ

Date:

ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2024ನೆ ಸಾಲಿನ ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಮಾಜ ಸೇವಕಿ ಅಲೆಮಾರಿ ಮತ್ತು ವಲಸೆ ಕಾರ್ಮಿಕರ ಮಕ್ಕಳ ತಾಯಿ ಎಂದೇ ಗುರುತಿಸಿಕೊಂಡಿರುವ ರೂಪಾ ಬಲ್ಲಾಳ್ ಅವರನ್ನು ಆಯ್ಕೆ ಮಾಡಲಾಗಿದೆ.

ಉಡುಪಿಯವರಾದ ರೂಪಾ ಬಳ್ಳಾಲ್‌ ಅವರು ಬಡವರು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗಾಗಿ ತಮ್ಮ ಮನೆಯಲ್ಲಿ ವಿದ್ಯಾ ದೇಗುಲವನ್ನು ತೆರೆದು ಅವರ ಜೀವನದಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗಿಸಿ ಸಮಾಜದಲ್ಲಿ ಸತ್ಪ್ರಜೆಗಳಾಗಿ ಮುಂದುವರಿಯಲು ಅವಕಾಶ ನಿರ್ಮಾಣ ಮಾಡಿ ಕೊಟ್ಟ ವ್ಯಕ್ತಿತ್ವ.

ಇದನ್ನು ಓದಿದ್ದೀರಾ? ಬೆಳಗಾವಿ | ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ‘2ಎ ಮೀಸಲಾತಿ’ ಹೋರಾಟ, ಪರಿಸ್ಥಿತಿ ಉದ್ವಿಗ್ನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜಾಪುರ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ದಾವಣಗೆರೆ, ಕೊಪ್ಪಳ ಮುಂತಾದ ಉತ್ತರ ಕರ್ನಾಟಕದಿಂದ ಕೂಲಿ ಕಾರ್ಮಿಕರಾಗಿ ವಲಸೆ ಬಂದು ಕೊಳಗೇರಿಯಲ್ಲಿ ಬದುಕುವ ಇವರ ಮಕ್ಕಳಿಗೆ ಕಳೆದ ಹದಿನೈದು ವರ್ಷಗಳಿಂದ ತಮ್ಮ ಮನೆಯಲ್ಲಿ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ.

ಸರಿ ಸುಮಾರು ಐನೂರಕ್ಕಿಂತ ಹೆಚ್ಚು ಮಕ್ಕಳು ಇವರ ನೆರಳಲ್ಲಿ ಬೆಳೆದು ಕನಸು ಕಟ್ಟಿಕೊಂಡಿದ್ದಾರೆ. ಶಾಲೆಯ ಬಗ್ಗೆ ಆಲೋಚಿಸದ ಹಲವು ಮಕ್ಕಳು ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಪಡೆದು ಸ್ವಾಭಿಮಾನಿಗಳಾಗಿ ಉದ್ಯೋಗ ಪಡೆಯುವ ಹಂತಕ್ಕೆ ಬೆಳೆದಿದ್ದಾರೆ. ಬಾಲ್ಯ ವಿವಾಹದ ಉರುಳಿಗೆ ಸಿಲುಕಿದ, ಹೆತ್ತವರ ಕುಡಿತದ ಚಟದಿಂದ ನೊಂದ, ಸಾಲದಲ್ಲಿ ಸಿಲುಕಿ ಜೀತತನಕ್ಕೆ ದೂಡಲ್ಪಟ್ಟ ಮಕ್ಕಳಿಗೆ ತನ್ನ ಮನೆಯಲ್ಲಿ ಆಸರೆ ನೀಡಿ ಅವರಿಗೆ ಕಲಿಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಇಂಗ್ಲಿಷ್, ಕನ್ನಡ, ಗಣಿತ, ವಿಜ್ಞಾನದ ಪಾಠದ ಜೊತೆಗೆ ಆಟ, ಸಂಗೀತ, ನೃತ್ಯ, ಭರತನಾಟ್ಯ, ಚಿತ್ರಕಲೆ, ಯೋಗವನ್ನು ಕಲಿಸುತ್ತಾರೆ. ಹೆಚ್ಚು ಬಾರಿ ರಕ್ತದಾನ ಮಾಡಿದ ಮಹಿಳೆ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ದೇಶದ ಅಪರೂಪದ ಮಹಾನಾಯಕ ಅಂಬೇಡ್ಕರ್:‌ ದೂಗೂರು ಪರಮೇಶ್ವರ್

ಬೆಂಗಳೂರು ವಿಶ್ವವಿದ್ಯಾಲಯದಿಂದ Bsc Home Science ಪದವಿದರರಾದ ಇವರು ಮಣಿಪಾಲ ವಿಶ್ವವಿದ್ಯಾಲಯದಿಂದ Msc in Yoga Therapy ಯಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಇವರ ಪತಿ ಶ್ರೀ.ಎನ್.ನಾಗರಾಜ್ ಬಲ್ಲಾಳ್, B.E. ರವರು ಉಡುಪಿಯ ವಿದ್ಯೋದಯ ಟ್ರಸ್ಟ್ ಇದರ ಅಧ್ಯಕ್ಷರಾಗಿ ಸೇವೆಯಲ್ಲಿದ್ದಾರೆ.

ಎಲೆಮರೆಯ ಕಾಯಿಯಂತೆ ಇಷ್ಟು ವರ್ಷಗಳ ಕಾಲ ಇವರು ಮಾಡಿದ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ 2024 ನೇ ಸಾಲಿನ BSWT ವರ್ಷದ ವ್ಯಕ್ತಿಯಾಗಿ ಆಯ್ಕೆ ಮಾಡಿದೆ. ಈ ಪ್ರಶಸ್ತಿಯೂ ಇಪ್ಪತ್ತೈದು ಸಾವಿರ ರೂ ನಗದು ಮತ್ತು ಸನ್ಮಾನ ಪತ್ರ, ಫಲಕ, ಫಲ ಹಾಗೂ ಉಡುಗೊರೆಯನ್ನು ಒಳಗೊಂಡಿರುತ್ತದೆ.

ದಿನಾಂಕ 25 ಡಿಸಂಬರ್ 2024 ರಂದು ಮಂಗಳೂರಿನ ವಿಶ್ವ ವಿದ್ಯಾಲಯ ಕಾಲೇಜು ಹಂಪನ್ಕಟ್ಟ ಇಲ್ಲಿನ ರವೀಂದ್ರ ಕಲಾ ಭವನದಲ್ಲಿ ನೂರ ಎಪ್ಪತೈದು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಶುಭ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...