ವಿವಾದಿತ ಪಠ್ಯಗಳ ಪರಿಷ್ಕರಣೆಗೆ ರುಪ್ಸಾ ಒತ್ತಾಯ

Date:

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬಿಜೆಪಿ ವಿಕೃತಗೊಳಿಸಿದ್ದ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿ, ಸಾಂವಿಧಾನಿ ಮತ್ತು ವೈಜ್ಞಾನಿಕ ವಿಷಯಗಳನ್ನು ಸೇರಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಅದರಂತೆ, ಈ ಬಾರಿ, 2023-24ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪುನಾರಂಭವಾಗುವ ಮುನ್ನವೇ ಪಠ್ಯಪುಸ್ತಕಗಳನ್ನು ಪರಿಷ್ಕರಿಸಬೇಕೆಂಬ ಒತ್ತಾಯಗಳು ಕೇಳಿಬಂದಿವೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಕುವೆಂಪು, ಬಸವಣ್ಣ, ಪಂಪ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕಳ ಇತಿಹಾಸವುಳ್ಳ ಪಠ್ಯಗಳನ್ನು ತೆಗೆದು ಹಾಕಿತ್ತು. ಸಾವರ್ಕರ್‌ ಸೇರಿದಂತೆ ಕೋಮುವಾದಿ ವಿಷಯಗಳನ್ನು ಸೇರಿಸಿತ್ತು. ಅದನ್ನು ಪರಿಷ್ಕರಿಸುವಂತೆ ಖಾಸಗಿ ಶಾಲಾ ಒಕ್ಕೂಟ ‘ರುಪ್ಸಾ‘ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ.

ಆದರೆ, ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಬೇಕಿರುವ ಪಠ್ಯಪುಸ್ತಕಗಳು ಮುದ್ರಣವಾಗಿದೆ ಎಂದು ತಿಳಿದುಬಂದಿದೆ. ಶಾಲೆ ಆರಂಭವಾಗುವ ಮೊದಲ ದಿನವೇ ಎಲ್ಲ ಶಾಲೆಗಳಿಗೂ ಪಠ್ಯಪುಸ್ತಕಗಳು ರವಾನೆಯಾಗಲಿವೆ ಎನ್ನಲಾಗಿದೆ. ಶಾಲೆಗಳು ಆರಂಭವಾಗಲು ಇನ್ನು ಕೇವಲ ಆರು ದಿನಗಳಷ್ಟೇ ಬಾಕಿ ಇವೆ. ಹೀಗಾಗಿ, ಈ ವರ್ಷದಲ್ಲೇ ಪಠ್ಯಪುಸ್ತಕಗಳು ಪರಿಷ್ಕರಣೆಯಾಗುವವೇ ಅಥವಾ ಮುಂದಿನ ಶೈಕ್ಷಣಿಕ ವರ್ಷಕ್ಕೆ ಬದಲಾಗುವವೇ ಎಂಬ ಗೊಂದಲ ಸೃಷ್ಟಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...