ಸಾಗರ | ಗ್ರಾಮೀಣ ಭಾಗದ ಕಾಲೇಜು ಕೂಡ ಅಭಿವೃದ್ಧಿ ಹೊಂದಬೇಕು: ರಾಬರ್ಟ್ ಡಿಕೋಸ್ಟ

Date:

ವಿದ್ಯಾರ್ಥಿಗಳ ಜೀವನ ಸಿಗುವುದು ಒಮ್ಮೆಲೆ ಮಾತ್ರ. ಅದನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಯಡೇಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಬರ್ಟ್ ಡಿಕೋಸ್ಟ ತಿಳಿಸಿದರು.

ಜ್ಞಾನ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ವೇದಿಕೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಗ್ರಾಮೀಣ ಪ್ರದೇಶದಲ್ಲಿ ಈ ಕಾಲೇಜು ನಡೆಯುತ್ತಿರುವುದೇ ನಮ್ಮ ಹೆಮ್ಮೆ. ಆದರೆ ಅನೇಕ ಮೂಲ ಭೂತ ಸೌಕರ್ಯಗಳ ಕೊರತೆ ಈ ಕಾಲೇಜಿನಲ್ಲಿ ಎದ್ದು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿಯನ್ನು ಹೊಂದಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 18 at 2.46.03 PM

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಬ್ದುಲ್ ನಝೀರುಲ್ಲಾ ಖಾನ್ ಮಾತನಾಡಿ, ವಿದ್ಯಾರ್ಥಿಗಳು ಮುಖ್ಯವಾಗಿ ಓದುವ ಸಮಯವನ್ನು ವ್ಯರ್ಥ ಮಾಡಬೇಡಿ. ನಿಮ್ಮ ತಂದೆ ತಾಯಿಗಳು ನಿಮ್ಮ ಮೇಲೆ ಅನೇಕ ಕನಸುಗಳನ್ನಿಟ್ಟು ಓದಿಸಿದ್ದಾರೆ. ಮುಂದೊಂದು ದಿನ ನೀವೆಲ್ಲರೂ ಉನ್ನತ ಹುದ್ದೆಗೆ ಏರಿ ಅವರ ಕನಸುಗಳನ್ನು ಈಡೇರಿಸಿ ಎಂದರು.

ಕನ್ನಡ ಉಪನ್ಯಾಸಕರಾದ ಡಾ. ಗಣೇಶ್ ಕೆಂಚನಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದಂತಹ ಡಾ. ಆರ್ ಸುರೇಶ್ ಪ್ರಾಂಶುಪಾಲರು ಮತ್ತು ಉಪನ್ಯಾಸಕರಾದ ಬೇಬಿ ಮತ್ತು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಿರೀಶ್ ಹಾಗೂ ಅಭಿಷೇಕ್ ಮತ್ತು ಇತರರು ಇದ್ದರು.

ವರದಿ: ಅಮಿತ್ .ಆರ್, ಆನಂದಪುರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...