ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು ಸ್ಥಳ ಸಮೀಕ್ಷೆಗೆ ಸಿಎಂ ಸೂಚನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2023- 24 ನೇ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಇಂದು ಸಭೆ ಜರುಗಿತು.

ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶಗಳು, 50 ಸಾವಿರ ಎರಕೆ ಹುಲ್ಲುಗಾವಲು ಪ್ರದೇಶಗಳು, 2 ಲಕ್ಷ ಬರ ಪರಿಹಾರ ಕಾಮಗಾರಿಗಳು, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿಗಳು ಹಾಗೂ 4268 ಭೂ ಕುಸಿತ ತಡೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳಿಗೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

27903 ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಶಾಂತಿಧಾಮಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. 5000 ಶಾಲಾ ಆರಣಗಳನ್ನು ವಿದ್ಯಾಧಾಮಗಳನ್ನಾಗಿ ಉನ್ನತೀಕರಿಸುವುದು, 750 ಗ್ರಾಮ ಸಂತೆಗಳನ್ನು ಹಾಗೂ 27 ಸಾವಿರ ಕೊಳವೆಬಾವಿ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಪ್ರಿಯಾಂಕ ಖರ್ಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರು ಪೂರೈಕೆ ಕುರಿತು ವರದಿ ಸಲ್ಲಿಸಲು ಸೂಚನೆ
ವರುಣಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ, ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ ಎಂದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ವಾರಾಂತ್ಯದಲ್ಲಿ ಗ್ರಂಥಾಲಯ ತೆರೆಯಿರಿ
ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ ಸಂವಿಧಾನ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ವಿದ್ಯಾರ್ಥಿಗಳಿಗೆ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಮೂರು ವರ್ಷಗಳಲ್ಲಿ ಇದನ್ನು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಆರ್‌ಟಿಐ ಕಾಯ್ದೆ ಕೊಲ್ಲುತ್ತಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕೂಸಿನ ಮನೆ

ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ, ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಗಳು ಸೂಚಿಸಿದರು.

ಮುಖ್ಯಮಂತ್ರಿಗಳ ಫೆಲೋಶಿಪ್‌ಗಾಗಿ ಪ್ರತಿ ತಾಲ್ಲೂಕಿನ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ಆಯ್ಕೆ ಮಾಡುವುದು 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಕಾರ್ಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಗ್ರಾಮೀಣ ಪ್ರದೇಶಗಳಲ್ಲಿ ಒಣ ತ್ಯಾಜ್ಯ ವಿಲೇವಾರಿಯಲ್ಲಿ ನಿರಂತರತೆ ಕಾಪಾಡಲು ಹಾಗೂ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು 27 ಜಿಲ್ಲೆಗಳಲ್ಲಿ ತಲಾ ಒಂದು ರಿಕವರಿ ಫೆಸಿಲಿಟಿಯನ್ನು ತಲಾ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, 22 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆಯುಕ್ತ ಅಂಜುಮ್ ಪರ್ವೇಜ್, ಸಭೆಯಲ್ಲಿ, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...