ಸದನವನ್ನು ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಸ್ಥಳಾಂತರಿಸಿ: ಎಸ್ ಸುರೇಶ್ ಕುಮಾರ್ ವ್ಯಂಗ್ಯ

Date:

ಇಂದಿನ (ಜು.18) ವಿಧಾನಸಭಾ ಅಧಿವೇಶನ ಕಲಾಪದಲ್ಲಿ ಸಚಿವರ ಗೈರು ಎದ್ದು ಕಂಡಿತು. ಈ ವಿಚಾರವಾಗಿ ಪ್ರತಿಪಕ್ಷದ ಸದಸ್ಯ ‌ಎಸ್‌ ಸುರೇಶ್ ಕುಮಾರ್ ಹಾಸ್ಯದ ದಾಟಿಯಲ್ಲಿಯೇ ವಾಗ್ದಾಳಿ ನಡೆಸಿದರು.

“ಮೊದಲ ಸಾಲಲ್ಲಿ ಕುಳಿತು‌ಕೊಳ್ಳುವ ಒಂಬತ್ತು ಜನ ಸಚಿವರ ಪೈಕಿ ಒಬ್ಬರೂ ಕೂಡ ಇಲ್ಲಿ ಹಾಜರಿಲ್ಲ. ನಾವು ಹೇಗೆ ಚರ್ಚೆ ಮಾಡಬೇಕು. ಇಂದಿನ ಸದನವನ್ನು ಒಂದು ದಿನದ ಮಟ್ಟಿಗಾದರೂ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಸ್ಥಳಾಂತರಿಸಿ. ಇದರಿಂದ ಸಚಿವರಿಗೆ ಅನುಕೂಲವಾಗುತ್ತದೆ” ಎಂದು ವ್ಯಂಗ್ಯವಾಗಿಯೇ ಕುಟುಕಿದರು.

“ಮಾಜಿ ಸಿಎಂ ಬೊಮ್ಮಾಯಿ ಅವರು ಸುರೇಶ್‌ ಕುಮಾರ್‌ ಮಾತಿಗೆ ಧ್ವನಿಗೂಡಿಸಿ, “ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಸದನ ನಡೆಸಿದ್ದರೆ ಕಾಂಗ್ರೆಸ್‌ ಸಚಿವರಿಗೆ ಬಹಳ ಅನುಕೂಲವಾಗುತ್ತಿತ್ತು” ಎಂದರು. ಬಿಜೆಪಿ ಸದಸ್ಯರು ಟೇಬಲ್‌ ತಟ್ಟಿ ಬೆಂಬಲ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭಾಧ್ಯಕ್ಷ ಯು ಟಿ ಖಾದರ್ ಅವರು ಪ್ರತಿಕ್ರಿಯಿಸಿ, “ಅವಕಾಶವಿದ್ದರೆ ಖಂಡಿತವಾಗಿಯೂ ಅಲ್ಲೇ ಸದನ ನಡೆಸುತ್ತಿದ್ದೆ. ನಿಯಮಗಳಲ್ಲಿ ಅವಕಾಶವಿಲ್ಲ” ಎಂದು ಸುರೇಶ್ ಕುಮಾರ್‌ ಅವರನ್ನು ಸಮಾಧಾನಪಡಿಸಿದರು. ಇದಕ್ಕೆ ಸುರೇಶ್‌ ಕುಮಾರ್‌ ಮರು ಉತ್ತರಿಸಿ, “ನಿಮ್ಮ ಪರಮಾಧಿಕಾರ ಬಳಸಿ ಸದನ ಹೋಟೆಲ್‌ನಲ್ಲಿ ನಡೆಸಿ. ಮತ್ತಷ್ಟು ಬಿಗ್‌ ಇವೆಂಟ್‌ ಆಗುತ್ತದೆ” ಎಂದರು.

ಕಾಂಗ್ರೆಸ್‌ ಸದಸ್ಯರ ವಲಯದಿಂದ, “ನಿಮ್ಮ ಅವಧಿಯಲ್ಲೂ ಹೀಗೆ ಆಗಿತ್ತು” ಎಂದು ಸುರೇಶ್‌ ಕುಮಾರ್‌ಗೆ ತಿರುಗೇಟು ನೀಡಿದರು. ಸಭಾಧ್ಯಕ್ಷರು ಮಧ್ಯ ಪ್ರವೇಶಿಸಿ, “ಈ ಚರ್ಚೆ ಬೇಡ. ಸದನದ ವಿಷಯ ಮುಂದುವರಿಸಿ” ಎಂದು ಎಲ್ಲರಿಗೂ ಸಮಾಧಾನ ಮಾಡಿದರು.

ಸದನ
ಮಂಗಳವಾರದ ಸದನದಲ್ಲಿ ಸಚಿವರು ಗೈರಾದ ದೃಶ್ಯ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...