ಸಾಗರ | ಮದ್ಯ ಅಕ್ರಮ ಸಾಗಾಟ, 2 ವರ್ಷ ಜೈಲು ಶಿಕ್ಷೆ

Date:

ಸಾಗರ, ಗೋವಾದಿಂದ ಮೈಸೂರಿಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ, ತಲಾ1 15 ಸಾವಿರ ದಂಡ ವಿಧಿಸಿದೆ.

ಮೈಸೂರಿನ ರಾಮದಾಸ್ ಮತ್ತು ಗಿರೀಶ್ ಶಿಕ್ಷೆಗೆ ಗುರಿಯಾದವರು. 2022ರ ಏಪ್ರಿಲ್ 17 ರಂದು ಕಾರಿನಲ್ಲಿ 48.5 ಲೀಟರ್ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ನಗರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

Hivನ್ಯಾಯಾಧೀಶರಾದ ಎಂ. ಮಾದೇಶ್, ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ವಕೀಲ ಚಂದ್ರಶೇಖರ್ ಎಚ್‌. ಎಸ್. ವಾದಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...