ಸಾಗರ | ರೈತ ವಿರೋಧಿ ಆದೇಶ ಹಿಂಪಡೆಯಿರಿ ; ಜನ, ಜಾನುವಾರುಗಳ ಸಹಿತ ಪ್ರತಿಭಟನೆ

Date:

ಸಾಗರ, ಕಾಡಿಗೆ ನಾಡಿನ ಜಾನುವಾರುಗಳಿಗೆ ನಿರ್ಬಂದ ಹೇರಿ ಆದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಅರಣ್ಯ ಸಚಿವರ ರೈತ ವಿರೋಧಿ ಆದೇಶದ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ನೇತೃತ್ವದಲ್ಲಿ ಜನ ಜಾನುವಾರುಗಳ ಸಹಿತ ಪ್ರತಿಭಟನೆ ನಡೆಸಿದರು.

ಅವರು ಸಾಗರ ಪಟ್ಟಣಕ್ಕೆ ಸಮೀಪದ ಕೆಳದಿ ರಸ್ತೆಯಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಮಲೆನಾಡು ಗಿಡ್ಡ ಜಾನುವಾರುಗಳು ಮತ್ತು ಎಮ್ಮೆ-ಕೋಣಗಳ ಸಹಿತ ಜಮಾಯಿಸಿ ಜಾನುವಾರುಗಳಿಗೆ ಹಸಿರು ಹುಲ್ಲೆ ಹಾಗೂ ಬತ್ತದ ಬಿಳಿ ಹುಲ್ಲು ತಿನ್ನಲು ಹಾಕಿ ಅರಣ್ಯ ಸಚಿವರ ರೈತ ವಿರೋಧಿ ಆದೇಶವನ್ನು ಖಂಡಿಸಿ ವಿನೂತನ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಅರಣ್ಯ ಸಚಿವರಿಂದ ಕಾಡು ಮತ್ತು ನಾಡನ್ನು ಬೇರ್ಪಡಿಸುವ ಹುನ್ನಾರ ನಡೆಯುತ್ತಿದೆ.ರಾಜಮಹಾರಾಜರುಗಳ ಕಾಲದಿಂದ ಜಾನುವಾರುಗಳಿಗೆ ಕಾಡು-ಮೇಡು ಆಹಾರಕ್ಕೆ ಆದಾರವಾಗಿದೆ.ಕಾಡಿನ ಮೇವು ತಿಂದು ತಿರುಗಾಟದಿಂದ ಸಂಜೆ ಮನೆಗೆ ಆಗಮಿಸುವ ಜಾನುವಾರುಗಳು ಮತ್ತು ಕುರಿಗಳ ಹಾಲು ಹಾಗೂ ಸಗಣಿ ಅತ್ಯಂತ ಔಷಧ ಪೌಷ್ಠಿಕವಾಗಿರುತ್ತದೆ ಎಂಬ ಪ್ರತೀತಿಯಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಡಿಗೆ ಜಾನುವಾರುಗಳು ಹೋಗುವುದರಿಂದ ಕಾಡಿನ ಅಂಚಿನಲ್ಲಿರುವ ಹುಲುಸಾಗಿ ಬೆಳೆದಿರುವ ಹಸಿರು ಹುಲ್ಲು ತಿನ್ನುವ ಮೂಲಕ ಬೇಸಿಗೆಯಲ್ಲಿ ಕಾಡಿಗೆ ಬೆಂಕಿ ಬೀಳುವ(ಕಾಡ್ಗಿಚ್ಚಿನ) ಅಪಾಯ ತಪ್ಪುತ್ತದೆ. ಹೈನುಗಾರಿಕೆಗೆ ಜಾನುವಾರುಗಳ ಕಾಡಿನ ಸಂಪರ್ಕಕ್ಕೆ ಯಾವುದೇ ನಿರ್ಬಂದ ಹೇರಬಾರದು ಎಂದರು.

ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾಗರದ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್‌ಕುಮಾರ್ ಅವರನ್ನು ಉದ್ದೇಶಿಸಿ ಮನವಿ ಮಾಡಿದ ರೈತಮುಖಂಡರು, ಮಲೆನಾಡಿನ ಜಾನುವಾರುಗಳಿಗೆ ಕಾಡು-ಮೇಡುಗಳಲ್ಲಿ ಮೇಯಲು ಯಾವುದೇ ನಿರ್ಬಂದ ಹೇರದೆ ಮುಕ್ತ ಅವಕಾಶ ಕಲ್ಪಿಸಬೇಕು.ಅರಣ್ಯ ಇಲಾಖೆ ರೈತರ ಪರವಾಗಿ ಸ್ಪಂದಿಸಬೇಕು.ಆನಂದಪುರಂ ಹೋಬಳಿ ಮಲ್ಲಂದೂರು ರೈತರುಗಳಿಗೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಅಡಚಣೆಗಳಿಗೆ ಕಡಿವಾಣ ಹಾಕಬೇಕು.ರೈತರ ಬೇಡಿಕೆಗೆ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಜಾನುವಾರುಗಳ ಮುಖಕ್ಕೆ ಅರಣ್ಯ ಸಚಿವರ ಮುಖವಾಡ ಅಳವಡಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...