ಸಾಗರ | ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ: ಶಾಸಕ ಗೋಪಾಲಕೃಷ್ಣ ಬೇಳೂರು

Date:

ನನಗೆ ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ, ಅದು ನನ್ನ ಕರ್ತವ್ಯ ಕೂಡ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ತಾಲೂಕಿನ ಆನಂದಪುರದಲ್ಲಿ ಆಚಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 11 ಕೋಟಿಗೂ ಅಧಿಕ ಅನುದಾನದಲ್ಲಿ ನಡೆಸಲಾಗುತ್ತಿರುವ ಕಾಮಗಾರಿಕೆಗಳಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು, “ಬಿಜೆಪಿ ನಾಯಕರು ಕೊರೋನ ಸಮಯದಲ್ಲಿ ಜನರ ಹಣ ಲೂಟಿ ಮಾಡಿದರು. ಅದರಲ್ಲೂ ಸಾಗರ ಭಾಗದಲ್ಲಿ ಹಾಲಪ್ಪನವರು ಒಂದೇ ಒಂದು ಕಟ್ಟಡವನ್ನು ನಿರ್ಮಿಸದೆ ಅಧಿಕಾರವನ್ನು ಕೊನೆಗೊಳಿಸಿದರು. ಹಾಗೆ ತಮ್ಮ ನಾಯಕರ ಮನೆಗೆ ಸೀಮಿತವಾಗಿ ರಸ್ತೆಯನ್ನು ನಿರ್ಮಿಸಿ ಕೊಟ್ಟಿದ್ದಾರೆಯೇ ಹೊರತು ಜನರಿಗೆ ಒಂದು ಅನುಕೂಲವಾಗುವಂತಹ ಕೆಲಸವನ್ನೂ ಮಾಡದೆ ಹೋದರು. ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿರಬಹುದು, ಆದರೆ ಕಡು ಬಡವರ ಮನೆಯಲ್ಲಿ ಬೆಳಕನ್ನು ತರಿಸಿದ್ದು ಗ್ಯಾರೆಂಟಿ ಯೋಜನೆಗಳೇ” ಎಂದರು.

WhatsApp Image 2025 02 20 at 10.00.06 AM 1

10 ವರ್ಷಗಳ ಬಳಿಕ ಜನತೆ ಅಧಿಕಾರ ನೀಡಿದ್ದಾರೆ. ಇದರ ಫಲವಾಗಿ ಯಾವುದೇ ಜಾತಿ, ಧರ್ಮ, ಕುಲ ಮರೆತು ಎಲ್ಲರನ್ನೂ ಸಮಾನರಂತೆ ಕಂಡು ಎಲ್ಲರಿಗೂ ಸೌಲಭ್ಯ ದೊರೆಯುವಂತೆ ಮಾಡುತ್ತೇನೆ. ಕಾಗೋಡು ತಿಮ್ಮಪ್ಪನವರ ಅವಧಿಯಲ್ಲಿ ರೈತರಿಗೆ ಹಕ್ಕು ಪತ್ರಗಳನ್ನು ನೀಡಿದರು ಆದರೆ ಅವರ ಬಳಿಕ ಯಾರು ಸಹ ನೀಡಲಿಲ್ಲ. ಈಗ ನಾವು ಮತ್ತೆ ರೈತರಿಗೆ ಹಕ್ಕು ಪತ್ರ ಕೊಡಿಸುವ ಕೆಲಸ ಮಾಡುತ್ತೇವೆ. ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಯು ನನ್ನ ಗುರಿಯಾಗಿದೆ ಹಾಗೆ ಬಡ ಜನರಿಗೆ ಅನುಕೂಲಕರವಾಗುವಂತಹ ಅನೇಕ ಕೆಲಸ ಕಾರ್ಯಗಳನ್ನು ಮಾಡುತ್ತಾ ಇದ್ದೇನೆ ಮುಂದೇಯೂ ಮುಂದುವರೆಸಿಕೊಂಡು ಹೋಗುವೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಎನ್‌ಎಸ್‌ಯುಐ ಸಾಗರ ತಾಲೂಕು ಘಟಕದ ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಈ ವೇಳೆ ಆಚಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕಲೀಮುಲ್ಲಾ ಖಾನ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೋಮಶೇಖರ್ ಲಾವಿಗೆರೆ, ಕೆಡಿಪಿ ಸದಸ್ಯ ರಜಾಕ್, ಬಗರ್‌ ಹುಕುಂ ಸದಸ್ಯ ರವಿಕುಮಾರ್, ಹೊಸೂರು ಗ್ರಾಪಂ ಉಪಾಧ್ಯಕ್ಷ ಚೌಡಪ್ಪ, ಲತಾ, ಕೋಮಲ, ಮೇನಕ, ಪುಷ್ಪ, ಅಬ್ದುಲ್ ಘನಿ ಹಾಗೂ ಇತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...