ಉಡುಪಿ | ಸಹಕಾರದ ಮೂಲಕ ರಾಷ್ಟ್ರ ಪ್ರಗತಿ ಸಾಧ್ಯ : ದಿನೇಶ್ ಹೆಗ್ಡೆ ಆತ್ರಾಡಿ

Date:

ಸಹಕಾರ ಭಾರತಿ ಉಡುಪಿ ತಾಲೂಕು ವತಿಯಿಂದ ಸಂಸ್ಥಾಪನಾ ದಿನಾಚರಣೆಯನ್ನು ಉಡುಪಿ ಇಂಡಸ್ಟ್ರಿಯಲ್ ಕೋ-ಆಪ್ ರೇಟಿವ್ ಸೊಸೈಟಿ, ಕಿನ್ನಿಮುಲ್ಕಿಯ ಸಭಾಭವನದಲ್ಲಿ ಗುರುವಾರ ಆಯೋಜಿಸಲಾಯಿತು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಹಕಾರ ಭಾರತಿ ಉಡುಪಿ ಜಿಲ್ಲಾ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳ ಪ್ರತೀ ಮನೆಗೊಬ್ಬರು ಸಹಕಾರ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಆರ್ಥಿಕ ಪ್ರಗತಿಯೊಂದಿಗೆ ದೇಶದ ಅಭಿವೃದ್ಧಿ ಸಾಧ್ಯವೆಂದರು.

ಸಹಕಾರ ಭಾರತಿ ಉಪಾಧ್ಯಕ್ಷ ಹರೀಶ್ ಕಲ್ಯ ಸಂಸ್ಥಾಪನಾ ದಿನಾಚರಣೆಯ ಮಹತ್ವ ಕುರಿತು ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಹಕಾರ ಭಾರತಿ ಉಡುಪಿ ತಾಲೂಕು ಅಧ್ಯಕ್ಷ ಪಾಂಡುರಂಗ ಕಾಮತ್ ಎಳ್ಳಾರೆ ಮಾತನಾಡಿ, ಪಂಚಾಯತ್ ಹಾಗೂ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರು ಮತ್ತು ಯುವಕರನ್ನು ಸಂಘಟಿಸಿ ಸಹಕಾರ ಭಾರತಿಯನ್ನು ವಿಸ್ತರಿಸುವ ಮೂಲಕ ಸಹಕಾರಿಗಳ ಅಭಿವೃದ್ಧಿಯ ಜೊತೆಗೆ ರಾಷ್ಟ್ರಭಾವನೆ ಬೆಳೆಸುವಂತೆ ಕರೆ ನೀಡಿದರು.

ತಾಲೂಕು ಮಹಿಳಾ ಪ್ರಮುಖ್ ರೂಪಾ ನಾಯಕ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನಾಗೇಶ್ ದೇವತಾ ಪ್ರಾರ್ಥನೆ ಸಲ್ಲಿಸಿದರು. ಪ್ರೀತಿ ಕಾಮತ್ ಹಾಗೂ ಜ್ಯೋತಿ ಕಾಮತ್ ಸಹಕಾರ ಗೀತೆಯನ್ನು ಹಾಡಿದರು. ರತ್ನಾಕರ್ ಶೆಟ್ಟಿ ಆತ್ರಾಡಿ ವಂದನಾರ್ಪಣೆ ಮಾಡಿದರು. ಮಂಜುನಾಥ್ ಮಣಿಪಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...