ಉಡುಪಿ | ‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ಹಾಗೂ ಆಪ್ತ ಸಮಾಲೋಚನೆ, ಅಗತ್ಯ ತುರ್ತು ಸೇವೆಗಳನ್ನು ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದ ಆವರಣದಲ್ಲಿ 24*7ರಂತೆ ಒದಗಿಸಲಾಗುತ್ತಿದೆ.
ತುರ್ತು ಸೇವೆಗಾಗಿ ಸರಕಾರವು ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದು ಸದರಿ ವಾಹನಕ್ಕೆ ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಚಾಲನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನಿರೂಪಾಧಿಕಾರಿ ಅನುರಾಧ ಹಾದಿಮನಿ, ಕಛೇರಿ ಅಧೀಕ್ಷಕರು, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...