ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

Date:

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ. ಇದರ ಹಿಂದಿನ ಉದ್ದೇಶವೇನೆಂದರೆ ಮಕ್ಕಳನ್ನು ಡ್ರಗ್ಸ್‌ನಲ್ಲಿ ಮುಳುಗಿಸಿದರೆ, ಮುಂದಿನ ಉತ್ತಮ ಪ್ರಜೆಗಳು ಈ ದೇಶದಲ್ಲಿ ಇಲ್ಲದಂತಾಗುತ್ತದೆ. ಆ ನಂತರ ಭಾರತವನ್ನು ಮುಳುಗಿಸಬಹುದೆಂಬ ನಿಟ್ಟಿನಲ್ಲಿ ಅಮೆರಿಕಾ ಸೇರಿದಂತೆ ಅಕ್ಕಪಕ್ಕದ ರಾಷ್ಟ್ರಗಳು ಸಂಚು ರೂಪಿಸಿವೆ ಎಂಬುದು ಅಧ್ಯಯನದಿಂದ ಕಂಡುಬಂದಿದೆ ಎಂದು ಡ್ರಗ್ಸ್‌ ಮುಕ್ತ ಸಕಲೇಶಪುರದ ಪ್ರಮುಖರು ಹಾಗೂ ಮಾಜಿ ಶಾಸಕ ಎಚ್‌ ಎಂ ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಹಮ್ಮಿಕೊಂಡಿರುವ ʼಡ್ರಗ್ಸ್‌ ಮುಕ್ತ ಸಕಲೇಶಪುರʼ ಎರಡನೇ ವರ್ಷದ ಆಂದೋಲನ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

“ತಾಯಿ ಗರ್ಭದಿಂದ ಒಂದು ಹುಟ್ಟು ಆದರೆ, ಸಮಾಜದ ಒಳಿತಿಗೆ ತೆರೆದುಕೊಳ್ಳುವುದೇ ಎರಡನೇ ಹುಟ್ಟು. ಇದಕ್ಕೆ ದ್ವಿಜ ಎನ್ನುತ್ತಾರೆ. ನಿನ್ನ ಜೀವಿತಕಾಲದಲ್ಲಿ ಎಂದೂ ಕೂಡ ಅಮಲು ಬರುವ ಪದಾರ್ಥಗಳನ್ನು ಸೇವಿಸಬಾರದು, ನಿನ್ನ ಹೆಣ್ಣುಮಕ್ಕಳನ್ನು ಯಾವುದೇ ಅಮಲುಗಾರರಿಗೆ ಮದುವೆ ಮಾಡಿಕೊಡಬಾರದೆಂದು ನನ್ನ ತಾಯಿ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದರು. ಇಂತಹ ನೈತಿಕ ಶಿಸ್ತು, ಧೈರ್ಯವನ್ನು ತುಂಬಿದಂತಹ ನನ್ನ ತಾಯಿಗೆ ಚಿರರುಣಿ” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿ ಆರ್‌ ಪಾಟೀಲ್‌ ಅವರು ಕಾಂಗ್ರಸ್‌ ಸರ್ಕಾರದ ಸಂಪುಟದ ಸಚಿವರು ನನಗೆ ಚಳುವಳಿ ಮಿತ್ರ. ಚೈನಾ ಪ್ರವಾಸಕ್ಕಾಗಿ ಹೋದಾಗ ಅದಕ್ಕೆ ಅವಕಾಶ ನೀಡಿದವರು ಬಿ ಆರ್‌ ಪಾಟೀಲ್.‌ ರಾಜಕೀಯ ಪಕ್ಷಗಳು ಎಲ್ಲವೂ ಒಂದೇ. ಆದರೆ ಬಣ್ಣ ಬೇರೆ, ಹಾಗಾಗಿ ನಾವು ಚಳುವಳಿಯ ಭಾಗವಾಗಿ ನಿಲ್ಲೋಣವೆಂದರು. ಈ ಹಿನ್ನೆಲೆಯಲ್ಲಿ ಪಂಜಾಬಿನಲ್ಲಿ ನಡೆಯುತ್ತಿರುವ ಡ್ರಗ್ಸ್‌ ಮುಕ್ತ ಆಂದೋಲನದಲ್ಲಿ ಭಾಗಿಯಾಗಿದ್ದೆವು. ಪಂಜಾಬಿನ ಶೇ.50ರಿಂದ 60ರಷ್ಟು ಮಕ್ಕಳು ಡ್ರಗ್ಸ್‌ನಲ್ಲಿ ಮುಳುಗಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯದಲ್ಲಿಯೂ ಕೂಡ ಅಧಿಕಾರಿಗಳು ಸಾರ್ವಜನಿಕರು ಒಟ್ಟುಗೂಡಿದಾಗ ಮಾತ್ರ ಸಮಾಜವನ್ನು ಉತ್ತಮವಾಗಿ ನಡೆಸಲು ಸಾಧ್ಯವಾಗುತ್ತದೆ. ಅದರಲ್ಲಿಯೂ ಪೊಲೀಸ್‌ ಮತ್ತು ಅಬಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಒಂದಾದಾಗ ಮಾತ್ರ ಇಂತಹ ದುಶ್ಚಟಗಳನ್ನು ತಡೆಗಟ್ಟುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

“ವಿಶೇಷವಾಗಿ ಮುಸ್ಲಿಂ ಹೆಣ್ಣುಮಕ್ಕಳು ಯಾವುದೇ ಕಾರಣಕ್ಕೂ ಹೊರಗೆ ಬರುವುದಿಲ್ಲ. ಆದರೆ ಇಂದು ಡ್ರಗ್ಸ್‌ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆಂದರೆ ನಮ್ಮ ಜಿಲ್ಲೆಯಲ್ಲಿ, ತಾಲೂಕಿನಲ್ಲಿ ಎಷ್ಟರ ಮಟ್ಟಿಗೆ ಡ್ರಗ್ಸ್‌ ಮಿತಿಮೀರಿದೆ ಎಂಬುದನ್ನು ಅರಿಯಬೇಕಾಗಿದೆ. ಇವತ್ತು ಸಮಾಜದಲ್ಲಿರುವಂತ ಪಿಡುಗನ್ನು ತೊಲಗಿಸಲು ನಾನೂ ಕೂಡ ಚಳವಳಿ ಕೈಗೊಂಡಿದ್ದೇನೆ. ಅರಣ್ಯ ಇಲಾಖೆಯ ಹಲವು ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿರುವುದು ಕಂಡುಬಂದಿದೆ. ಅಸ್ಸಾನಿಂದ ಬಂದಿರುವ ಕೆಲಸಗಾರರ ಬಳಿ ಎರಡೂವರೆ ಕೆಜಿ ಗಾಂಜಾ ಸಿಕ್ಕಿದೆ. ಬೆಳೆಗಾರರು, ಪೋಷಕರು ಜಾಗ್ರತರಾಗಿ ಗಾಂಜಾ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಬೇಕು” ಎಂದು ಕರೆ ನೀಡಿದರು.

ಅತಿಥಿಗಳಾದ ಉಪವಿಭಾಗಾಧಿಕಾರಿ ಎಚ್‌ ಡಿ ರಾಜೇಶ್‌, ತಹಶೀಲ್ದಾರ್‌ ಸುಪ್ರೀತ, ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌, ಕಾರ್ಯ ನಿರ್ವಹಣಾಧಿಕಾರಿ ಗಂಗಾಧರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ‌ಧರ್ಮಸ್ಥಳ ನಶಾ ಮುಕ್ತ ಕೇಂದ್ರದ ಡಾ. ನವೀನ್‌ ಚಂದ್ರಶೇಕರ್ ಸೇರಿದಂತೆ‌ ಪತ್ರಕರ್ತ ಮಲ್ನಾಡ್‌ ಮೆಹಬೂಬ್ ಬಹುತೇಕ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...