ಸನಾತನ ಧರ್ಮ ವಿವಾದ | ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

Date:

  • ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೇನ್ಸ್ ಠಾಣೆಯಲ್ಲಿ ಪ್ರಕರಣ ದಾಖಲು
  • ವಕೀಲರಾದ ಹರ್ಷ ಗುಪ್ತ, ರಾಮ್ ಸಿಂಗ್ ಲೋಧಿ ದೂರಿನ ಮೇರೆಗೆ ಎಫ್‌ಐಆರ್

ಸನಾತನ ಧರ್ಮ ಹೇಳಿಕೆ ವಿಚಾರವಾಗಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಂಪುರದಲ್ಲಿ ಪ್ರಕರಣ ದಾಖಲಾಗಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆ ಕೆರಳಿಸುವ, ಉದ್ದೇಶಪೂರ್ವಕ, ದುರುದ್ದೇಶದ ಕೃತ್ಯಗಳು) ಮತ್ತು 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಪ್ರಚೋದನೆ) ಅಡಿಯಲ್ಲಿ ಇಲ್ಲಿನ ಸಿವಿಲ್ ಲೇನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡಿನಲ್ಲಿ ಕಳೆದ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಕೆ ಮಾಡಿದ್ದರು. ನಂತರ ಸನಾತನ ಧರ್ಮ ನಿರ್ಮೂಲನೆ ಆಗಬೇಕು ಎಂದಿದ್ದರು. ಅವರ ವಿರುದ್ಧ ದೇಶಾದ್ಯಂತ ಹಿಂದೂಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಉದಯನಿಧಿ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೌರಿ ಲಂಕೇಶ್ ಹಂತಕರಿಗೆ ಶೀಘ್ರವೇ ದೊರೆಯಲಿ ಶಿಕ್ಷೆಯ ಮೋಕ್ಷ!

ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 260ಕ್ಕೂ ಹೆಚ್ಚು ಗಣ್ಯರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದರು. ವಕೀಲರಾದ ಹರ್ಷ ಗುಪ್ತ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...