ಲೋಕಸಭಾ ಚುನಾವಣೆ | ಅಧಿಕಾರಿ, ಸಿಬ್ಬಂದಿಗಳಿಗೆ ದೀರ್ಘಾವಧಿ ರಜೆಗೆ ಜಿಲ್ಲಾ ಚುನಾವಣಾಧಿಕಾರಿಯಿಂದ ಮಂಜೂರಾತಿ ಕಡ್ಡಾಯ

Date:

2024ರ ಲೋಕಸಭಾ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕಾರ್ಯಗಳು ತೀವ್ರಗತಿಯಲ್ಲಿ ಜರಗುತ್ತಿವೆ. ಹೀಗಾಗಿ, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ತಂಡಗಳನ್ನು ರಚಿಸಿ ಕಾರ್ಯವೈಖರಿಯನ್ನು ಹಂಚಿಕೆ ಮಾಡಲಾಗಿದೆ. ಈ ಎಲ್ಲ ಅಧಿಕಾರಿ, ಸಿಬ್ಬಂದಿಗಳ ದೀರ್ಘಾವಧಿ ರಜೆ ತೆಗೆದುಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಯಿಂದ ಮಂಜೂರಾತಿ ಪಡೆಯುವುದು ಕಡ್ಡಾಯ ಎಂದು ಧಾರವಾಡ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ನಿರ್ದೇಶಿಸಿದ್ದಾರೆ.

ಚುನಾವಣಾ ಕೆಲಸಗಳ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಅವರು ಆದೇಶ ಹೊರಡಿಸಿದ್ದಾರೆ. “ಚುನಾವಣಾ ಕೆಲಸಕ್ಕೆ ನೇಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಚುನಾವಣೆ ಮುಕ್ತಾಯಗೊಳ್ಳುವವರೆಗೂ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕಾಗಿರುತ್ತದೆ” ಎಂದು ಹೇಳಿದ್ದಾರೆ.

“ಧಾರವಾಡ ಜಿಲ್ಲೆಯಲ್ಲಿನ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಚುನಾವಣೆ ಮುಕ್ತಾಯಗೊಳ್ಳುವವರೆಗೆ ಹಂಚಿಕೆ ಮಾಡಿರುವ ಕರ್ತವ್ಯಗಳನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ದೀರ್ಘಾವಧಿ ರಜೆ ಮಂಜೂರು ಮಾಡುವಂತಿಲ್ಲ” ಎಂದು ನಿರ್ದೇಶನ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...