ಆರ್‌ಎಸ್‌ಎಸ್‌ ಅಂಗ ಸಂಸ್ಥೆಗೆ ಗೋಮಾಳ ಮಂಜೂರು: ಹಿಂದಿನ ಸರ್ಕಾರದ ಆದೇಶಕ್ಕೆ ತಡೆ

Date:

ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ ಭೂಮಿಯನ್ನು ಮಂಜೂರು ಮಾಡಿದ್ದ ಹಿಂದಿನ ಬಿಜೆಪಿ ಸರ್ಕಾರದ ಆದೇಶವನ್ನು ಕಾಂಗ್ರೆಸ್‌ ಸರ್ಕಾರ ತಡೆಹಿಡಿದಿದೆ.

ಬೆಂಗಳೂರಿನ ತಾವರೆಕೆರೆ ಬಳಿಯ ಕುರುಬರಹಳ್ಳಿಯಲ್ಲಿ 35.33 ಎಕರೆ ಗೋಮಾಳವನ್ನು ಜನಸೇವಾ ಟ್ರಸ್ಟಿಗೆ ನೀಡಿ, 2022ರ ಸೆಪ್ಟೆಂಬರ್‌ನಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು.

ಈಗ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ವಿವಿಧ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ಹಂಚಿಕೆ ಮಾಡಿರುವ ಬಗ್ಗೆ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ, “ಜನಸೇವಾ ಟ್ರಸ್ಟಿಗೆ 35.33 ಎಕರೆ ಭೂಮಿಯನ್ನು ನೀಡುವುದನ್ನು ತಡೆಹಿಡಿಯಲಾಗಿದೆ. ಅಲ್ಲದೆ, ಚುನಾವಣೆಗೂ ಮುಂಚೆ ಹಂಚಿಕೆಯಾಗಿದ್ದ ಎಲ್ಲ ಹಂಚಿಕೆಗಳಿಗೂ ತಡೆ ನೀಡಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ಕಾಮಗಾರಿಗಳನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದರು. ಆ ವೇಳೆ, ಗೋಮಾಳ ಮಂಜೂರಾತಿಗೂ ತಡೆ ನೀಡಿದ್ದರು. ಆ ಗೋಮಾಳ ಭೂಮಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಹಿಂದಿನ ಬಿಜೆಪಿ ಸರ್ಕಾರವು ಆದಿಚುಂಚನಗಿರಿ ಮಠ, ಸಿದ್ಧಗಂಗಾ ಮಠ, ಇಸ್ಕಾನ್, ರಾಷ್ಟ್ರೋತ್ಥಾನ ಪರಿಷತ್, ಕರ್ನಾಟಕ ಲಾನ್ ಟೆನ್ನಿಸ್ ಅಸೋಸಿಯೇಷನ್, ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ರಾಜ್ಯಾದ್ಯಂತ 252.36 ಎಕರೆ ಗೋಮಾಳ ಭೂಮಿಯನ್ನು ಮಂಜೂರು ಮಾಡಿತ್ತು ಎಂದು ತಿಳಿದುಬಂದಿದೆ.

“ಆ ಆದೇಶಗಳಿಗೆ ತಡೆಯೊಡ್ಡಲಾಗಿದೆ. ಹಿಂದಿನ ಸರ್ಕಾರ ಮಾಡಿರುವ ಅವಸರದ ಹಂಚಿಕೆ ಪ್ರಕರಣಗಳನ್ನು ಪರಿಶೀಲಿಸುತ್ತಿದ್ದೇವೆ. ಅರ್ಹತೆ ಮತ್ತು ಉದ್ದೇಶದ ಆಧಾರದ ಮೇಲೆ ನಾವು ಅನುದಾನವನ್ನು ಪರಿಶೀಲಿಸುತ್ತೇವೆ” ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...