ಬಂಟ್ವಾಳ | ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಸಂಘಪರಿವಾರ ಪ್ರತಿಭಟನೆ: ಬಿಗಿ ಬಂದೋಬಸ್ತ್‌

Date:

ಮೀಲಾದುನ್ನಬಿ ವಿಚಾರವಾಗಿ ಆರಂಭಗೊಂಡ ಸೋಷಿಯಲ್ ಮೀಡಿಯಾ ವಾಗ್ವಾದದಿಂದಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಸಿ ರೋಡ್‌ನಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು.

ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಹಸೈನಾರ್ ಎಂಬವರ ಪ್ರಚೋದನಕಾರಿ ಹೇಳಿಕೆಯಿಂದಾಗಿ ಈ ಬೆಳವಣಿಗೆ ನಡೆದಿದೆ. ಬಿ ಸಿ ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು, ಆಡಿಯೋ ಸಂದೇಶ ರವಾನಿಸಿದವರು ತಾಕತ್ತಿದ್ದರೆ ಬರಲಿ ಎಂದು ಸವಾಲು ಹಾಕಿದ್ದರು.

ಅಲ್ಲದೇ, ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಭದ್ರತೆಗಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಎನ್.ಯತೀಶ್, ಬಂಟ್ವಾಳದ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ದ.ಕ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೈಕಂಬ ಮಸೀದಿಯ ಮೀಲಾದ್ ಮೆರವಣಿಗೆಯ ಮಾರ್ಗವನ್ನು ನಾವು ಬದಲಾವಣೆ ಮಾಡಿಲ್ಲ. ಹಿಂದೂ ಸಂಘಟನೆಯವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದರು. ಹಾಗಾಗಿ, ಬಿ.ಸಿ ರೋಡ್ ಜಂಕ್ಷನ್‌ನಲ್ಲಿ ಅವಕಾಶ ನೀಡಿದ್ದೆವು. ಏನಾದರೂ ಸಮಸ್ಯೆಯಾದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದೇವೆ” ಎಂದು ತಿಳಿಸಿದರು.

“ಪ್ರಚೋದನಾಕಾರಿ ಆಡಿಯೋ ಹರಿಯಬಿಟ್ಟ ಇಬ್ಬರ ಮೇಲೆಯೂ ಕ್ರಮವಾಗಿದೆ. ಶರೀಫ್ ಹಾಗೂ ಹಸೈನಾರ್ ಇಬ್ಬರನ್ನು ಬಂಧಿಸಿದ್ದೇವೆ. ಗಣೇಶ ಚತುರ್ಥಿ ಹಾಗೂ ಮೀಲಾದುನ್ನಬಿ ಮುನ್ನವೇ ಶಾಂತಿ ಸಭೆ ಮಾಡಿದ್ದೇವೆ. ಈವರೆಗೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮುಂದೆಯೂ ಅಹಿತಕರ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳುತ್ತೇವೆ. ಪರಿಸ್ಥಿತಿಗೆ ಅನುಗುಣವಾಗಿ ಬಿ.ಸಿ ರೋಡಿನಲ್ಲಿ ಬಂದೋಬಸ್ತ್ ಮುಂದುವರೆಸುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...