ಕಲಬುರಗಿ | ಜನವರಿ 12 ರಂದು ಎಸ್‍ಎಫ್‍ಐ ಮತ್ತು ಜ್ಯಾತ್ಯಾತೀತ ವಿದ್ಯಾರ್ಥಿ ಸಂಘಟನೆಗಳಿಂದ ಪಾರ್ಲಿಮೆಂಟ್ ಚಲೋ

Date:

ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಜನವರಿ 12 ರಂದು ಎಸ್‍ಎಫ್‍ಐ ಮತ್ತು ಜ್ಯಾತ್ಯಾತೀತ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪಾರ್ಲಿಮೆಂಟ್ ಚಲೋ ನಡೆಸಲಾಗುತ್ತಿದೆ ಎಂದು ಎಸ್‍ಎಫ್‍ಐ ರಾಜ್ಯ ಪದಾಧಿಕಾರಿ ದಿಲೀಪ್ ತಿಳಿಸಿದರು.

ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿ, “ಶಿಕ್ಷಣದ ಖಾಸಗೀಕರಣ, ವಾಣಿಜ್ಯೀಕರಣ ಮತ್ತು ಕೇಂದ್ರೀಕರಣವನ್ನು ನಿಲ್ಲಿಸಿ ಮತ್ತು ಸ್ನಾತಕೋತ್ತರ ಹಂತದವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಜಾರಿಗೊಳಿಸಬೇಕು. ಸರ್ವರಿಗೂ ಶಿಕ್ಷಣ ಮತ್ತು ಉದ್ಯೋಗವನ್ನು ಖಾತ್ರಿಪಡಿಸಲು ಭಗತ್ ಸಿಂಗ್ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯಿದೆಯನ್ನು ಜಾರಿಗೊಳಿಸಬೇಕು, ಹೊಸ ಶಿಕ್ಷಣ ನೀತಿ-2020, ನೀಟ್ ಮತ್ತು ಇತ್ತೀಚೆಗೆ ಜಾರಿಗೆ ತಂದ ಗುಜರಾತ್ ಸಾಮಾನ್ಯ ವಿಶ್ವವಿದ್ಯಾಲಯ ಕಾಯ್ದೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದರು.

“ಹಾಸ್ಟೆಲ್‍ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು ಅವುಗಳ ವಿದ್ಯಾರ್ಥಿ ಸಾಮರ್ಥ್ಯವನ್ನು ಹೆಚ್ಚಿಸಬೇಕು, ನಿಯಮಿತ ವಿದ್ಯಾರ್ಥಿ ವೇತನಗಳು ಮತ್ತು ಫೆಲೋಶಿಪ್‍ಗಳನ್ನು ನೀಡಬೇಕು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಇತರ ಸರ್ಕಾರಿ ವಲಯಗಳಲ್ಲಿ ಖಾಲಿಯಿರುವ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು, ಪ್ರತಿ ನಿರುದ್ಯೋಗಿಗಳಿಗೆ ಕನಿಷ್ಠ 5000 ರೂ.ಮಾಸಿಕ ನಿರುದ್ಯೋಗ ಭತ್ಯೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲಾ ಬೇಡಿಕೆಗಳು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ʼಭಾರತ ರಕ್ಷಿಸಿ, ಬಿಜೆಪಿ ತಿರಸ್ಕರಿಸಿʼ ಎಂಬ ಘೋಷಣೆಯಡಿ ಪಾರ್ಲಿಮೆಂಟ್ ಚಲೋ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

ಈ ಸಂದರ್ಭದಲ್ಲಿ ಎಸ್ಎಫ್‌ಐ ಪದಾಧಿಕಾರಿಗಳಾದ ರಮೇಶ ವೀರಾಪೂರು, ಗಣೇಶ್ ರಾಥೋಡ್, ಗ್ಯಾನೇಶ್ ಕಡಗಡ್, ಸೋಮಶೇಖರ್, ಸುಜಾತಾ, ನಟರಾಜ್ ಜಿ, ಮೇಘಾ, ನಾಗಮ್ಮ, ಹುಲಿಗೆಮ್ಮ, ಮಾಲಾಶ್ರೀ, ಅಭಿಷೇಕ್, ಸರ್ವೇಶ್, ದರ್ಶನ್, ನಿಶಾಂತ್, ವರುಣ್, ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...