ಉಡುಪಿ | ಸಾಸ್ತಾನ ಟೋಲ್ ಗೇಟ್‌ನಲ್ಲಿ ಮಾಜಿ ಸೈನಿಕನಿಗೆ ಅವಮಾನ: ರಸ್ತೆ ತಡೆದು ಆಕ್ರೋಶ

Date:

ಗಣರಾಜ್ಯೋತ್ಸವದ ದಿನದಂದೇ ಯುದ್ಧದಲ್ಲಿ ಗಂಭೀರವಾಗಿ ಗಾಯಗೊಂಡ ನಿವೃತ್ತ ಸೈನಿಕನಿಗೆ ಟೋಲ್ ವಿನಾಯಿತಿ ನಿರಾಕರಿಸಿ ಅವಮಾನಿಸಿದ ಘಟನೆಗೆ ಸಂಬಂಧಿಸಿ, ಮಾಜಿ ಸೈನಿಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಸಾಸ್ತಾನ ಹೋರಾಟಗಾರರು ಸಾಸ್ತಾನ ಟೋಲ್ ಗೇಟ್ ಬಳಿ ರಸ್ತೆ ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

1009314223

ಈ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಸಾಸ್ತಾನ ಇದರ ಅಧ್ಯಕ್ಷ ಶ್ಯಾಮಸುಂದರ್ ನ್ಯಾಯರಿ, ಮಾಜಿ ಸೈನಿಕನ ಮೇಲೆ ಮಾನವೀಯತೆಯಿಲ್ಲದ ರೀತಿಯಲ್ಲಿ ಟೋಲ್ ಗೇಟ್ ಸಿಬ್ಬಂದಿ ವರ್ತಿಸಿದ್ದಾರೆ. ಈ ಕುರಿತು ಈಗಾಗಲೇ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ, ನಿವೃತ್ತ ಸೈನಿಕ ಶ್ಯಾಮರಾಜ್ ಅವರು 21ನೇ ಪ್ಯಾರಾ ಸ್ಪೆಷಲ್ ಫೋರ್ಸ್‌ನ ಪ್ಯಾರಾಟೂಪರ್ ಆಗಿದ್ದು, ಕಾಸರಗೋಡು ಜಿಲ್ಲೆಯವರಾಗಿದ್ದಾರೆ. ಅವರ ಪತ್ನಿ ಮಿಲಿಟರಿ ನರ್ಸಿಂಗ್ ವಿಭಾಗದಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೋಸ್ಟಿಂಗ್ ಸಂಬಂಧಿತ ಪ್ರಯಾಣದ ವೇಳೆ ಆರ್‌ಎಂಎ (RMA) ವತಿಯಿಂದ ನೀಡಲಾಗಿದ್ದ ಟೋಲ್ ವಿನಾಯಿತಿ ಪತ್ರವನ್ನು ತೋರಿಸಿದರೂ ಸಿಬ್ಬಂದಿ ನಿರಾಕರಿಸಿದ್ದಾರೆ ಎಂದು ಹೇಳಿದರು.

ಘಟನೆಯ ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 26ರಂದು ಗಣರಾಜ್ಯೋತ್ಸವದ ದಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ, ಯುದ್ಧದಲ್ಲಿ ಗಾಯಗೊಂಡ ನಿವೃತ್ತ ಸೈನಿಕ ಶ್ಯಾಮರಾಜ್ ಅವರಿಗೆ ಅಧಿಕೃತ ಟೋಲ್ ವಿನಾಯಿತಿ ಪತ್ರವಿದ್ದರೂ ಟೋಲ್ ಸಿಬ್ಬಂದಿ ವಿನಾಯಿತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಾಸ್ತಾನ ಟೋಲ್ ಮೂಲಕ ಪ್ರಯಾಣಿಸುತ್ತಿದ್ದ ವೇಳೆ ಶ್ಯಾಮರಾಜ್ ಅವರು ತಮ್ಮ ಬಳಿ ಇದ್ದ ಅಧಿಕೃತ ಟೋಲ್ ವಿನಾಯಿತಿ ಪತ್ರವನ್ನು ತೋರಿಸಿದರೂ, ಸಿಬ್ಬಂದಿ ಅದನ್ನು ಒಪ್ಪದೇ ಟೋಲ್ ಪಾವತಿಸುವಂತೆ ಒತ್ತಾಯಿಸಿದ್ದಾರೆ. ದೇಶದ ಅನೇಕ ಟೋಲ್ ಪ್ಲಾಜಾಗಳಲ್ಲಿ ಈ ವಿನಾಯಿತಿ ಮಾನ್ಯವಾಗುತ್ತಿದ್ದರೂ, ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಮಾತ್ರ ಸಮಸ್ಯೆ ಎದುರಾಗಿದೆ ಎಂದು ಶ್ಯಾಮರಾಜ್ ದೂರಿದ್ದಾರೆ.

1009311565

ಆಪರೇಶನ್ ಪರಾಕ್ರಮ್ ಸಂದರ್ಭದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಗಿಸಿ ವಾಪಸ್ಸು ಬರುತ್ತಿದ್ದಾಗ ಶ್ಯಾಮರಾಜ್ ಅವರ ವಾಹನ ಲ್ಯಾಂಡ್‌ಮೈನ್ ಸ್ಫೋಟಕ್ಕೆ ಒಳಗಾಗಿತ್ತು. ಈ ಭೀಕರ ದುರಂತದಲ್ಲಿ 15 ಸೈನಿಕರು ಹುತಾತ್ಮರಾಗಿದ್ದು, ಬದುಕುಳಿದ ಇಬ್ಬರಲ್ಲಿ ಶ್ಯಾಮರಾಜ್ ಒಬ್ಬರು. ಗಂಭೀರ ಗಾಯಗಳಿಂದಾಗಿ ಅವರು ಸಂಪೂರ್ಣ ವಿಕಲಾಂಗರಾಗಿದ್ದಾರೆ.

1009314222

ದೇಶಕ್ಕಾಗಿ ಪ್ರಾಣಪಣ ತೊಟ್ಟು ಹೋರಾಡಿದ ಸೈನಿಕನಿಗೆ ಈ ರೀತಿಯ ವರ್ತನೆ ಅತ್ಯಂತ ಖಂಡನೀಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್ ಭೇಟಿ ನೀಡಿದ್ದು, ಪ್ರತಿಭಟನಾಕಾರರನ್ನು ಮನವೊಲಿಸಲಿದ್ದಾರೆ. ಸಾಸ್ತಾನ ಟೋಲ್ ಗೇಟ್ ನ ವ್ಯವಸ್ಥಾಪಕ ರಾಜಕುಮಾರ್ ಸ್ಥಳಕ್ಕೆ ಆಗಮಿಸಿ ಕ್ಷಮೆ ಕೇಳಿದ್ದು ಇದನ್ನು ಮರುಕಳಿಸದಂತೆ ನೋಡಿಕೊಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...