ಚಿಕ್ಕಬಳ್ಳಾಪುರ | ದೇಶಾದ್ಯಂತ 33 ಸಾವಿರ ಪುಟಾಣಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ : ಡಾ.ರಘುಪತಿ

Date:

ಸತ್ಯ ಸಾಯಿ ಸಂಸ್ಥೆಯು ಛತ್ತೀಸ್‌ಗಡ, ಹರಿಯಾಣ, ಮುಂಬಯಿ, ಮುದ್ದೇನಹಳ್ಳಿ, ಹೈದರಾಬಾದ್‌ ಸೇರಿದಂತೆ ಒಟ್ಟು 5 ರಾಜ್ಯಗಳಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಿದ್ದು, ಇದುವರೆಗೆ 33 ಸಾವಿರ ಮಕ್ಕಳಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ರಘುಪತಿ ಹೇಳಿದರು.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 55 ಲಕ್ಷ ಸರಕಾರಿ ಶಾಲಾ ಮಕ್ಕಳಿಗೆ ಸಾಯಿಸೂರ್‌ ಹೆಸರಲ್ಲಿ ರಾಗಿ ಹೆಲ್ತ್‌ಮಿಕ್ಸ್‌ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯೆ, ಆರೋಗ್ಯ, ಆಹಾರ ಇವುಗಳು ಮಾರಾಟದ ವಸ್ತುಗಳಾಗಬಾರದು ಎಂದು ಸತ್ಯ ಸಾಯಿ ಬಾಬಾ ಹೇಳಿದ್ದಾರೆ. ಹಾಗೆಯೇ, ಅದನ್ನು ಸಾಧಿಸಿ ತೋರಿಸಿದ್ದಾರೆ. ಈ ಹಿಂದಿ ಕೇವಲ 2 ಶಾಲೆಗಳಿದ್ದವು, ಪ್ರಸ್ತುತ 22 ಶಾಲೆಗಳಾಗಿವೆ. ಪ್ರತೀ ಮೂರನೇ ಭಾನುವಾರ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಗರ್ಭಿಣಿ ಸ್ತ್ರೀಯರ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿ, ಗರ್ಭಿಣಿಯರಿಗೆ ಅವಶ್ಯವಿರುವ ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ ಪೌಡರ್‌ ವಿತರಣೆ ಮಾಡಲಾಗಿದೆ. ಇದರಿಂದ ಚಿಕ್ಕಬಳ್ಳಾಪುರದಲ್ಲಿ ತಾಯಂದಿರ ಮರಣ ಪ್ರಮಾಣ(ಎಂಎಂಆರ್‌ ಇಂಡೆಕ್ಸ್‌) ಶೇ.50ರಷ್ಟು ಕಡಿಮೆ ಆಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
satya sai hospital1

ಬಡವರು ಮತ್ತು ಹಿಂದುಳಿದ ವರ್ಗದ ಜನರ ಸೇವೆಗಾಗಿ ಉಚಿತ ಹೃದಯ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಇದೇ ಜನವರಿ 27ರಿಂದ 31ವರೆಗೆ ನಡೆದ 5ನೇ ಉಚಿತ ಮಕ್ಕಳ ಹೃದಯ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ವಿವಿಧ ದೇಶಗಳ ವೈದ್ಯರು ಪಾಲ್ಗೊಂಡಿದ್ದು, 5ನೇ ಶಿಬಿರದಲ್ಲಿ ಒಟ್ಟು 38 ಮಕ್ಕಳಿಗೆ ಜೀವತುಂಬಿದ್ದಾರೆ. ಸೇವಾ ಮನೋಭಾವದಿಂದ ಅವರ ಸ್ವಂತ ಖರ್ಚಿನಲ್ಲೇ ಬರುತ್ತಿರುವ ವಿದೇಶಿ ವೈದ್ಯರು ತಮ್ಮ ರಜಾ ದಿನಗಳನ್ನು ಇಂತಹ ಶಿಬಿರಗಳಿಗೆ ಮುಡುಪಾಗಿಟ್ಟು, ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 5 ತಿಂಗಳಲ್ಲಿ 22 ದೇಶಗಳ ವೈದ್ಯರು ಇಲ್ಲಿಗೆ ಬಂದಿದ್ದಾರೆ ಎಂದು ಮಾಹಿತಿ ನೀಡಿದರು.

ಹೃದಯ ತಜ್ಞ ಡಾ.ಸಿ.ಹಿರೇಮಠ್ ಮಾತನಾಡಿ, ಈ ಶಿಬಿರದಲ್ಲಿ ಆಫ್ರಿಕಾ ದೇಶದ ಮಗು ಸೇರಿದಂತೆ ದಿನಕ್ಕೆ 8-9ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಮಕ್ಕಳ ದೇಹ ತೂಕದ ಆಧಾರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗು ಹುಟ್ಟಿದಾಗ ನೀಲಿ ಬಣ್ಣ ಹೊಂದಿರುವ ಮಕ್ಕಳು, ಹೃದಯ ಕವಾಟು ಇಲ್ಲದೇ ಇರುವ ಮಕ್ಕಳು ಹಾಗೂ ಇತರೆ ಹೃದಯ ಸಂಬಂಧಿ ಕಾಯಿಲೆ ಹೊಂದಿರುವ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಹಾರ್ಟ್‌ ವಾಲ್ವ್‌ ಬ್ಯಾಂಕ್‌ ಸ್ಥಾಪನೆ :

ಕೆಲ ಮಕ್ಕಳು ಹುಟ್ಟಿದಾಗ ಹೃದಯ ಕವಾಟು ಇರುವುದಿಲ್ಲ. ಅಂತಹ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸದ್ಯದಲ್ಲೇ ಹಾರ್ಟ್ ವಾಲ್ವ್ ಬ್ಯಾಂಕ್ ಸ್ಥಾಪನೆ ಮಾಡುತ್ತಿದ್ದೇವೆ. ಭಾರತದಲ್ಲಿ 7 ಮಾತ್ರ ಹಾರ್ಟ್ ವಾಲ್ವ್ ಬ್ಯಾಂಕ್‌ಗಳಿದ್ದು, ಜಗತ್ತಿನ ಮೊದಲ ಉಚಿತ ಹಾರ್ಟ್‌ ವಾಲ್ವ್‌ ಬ್ಯಾಂಕ್‌ ನಮ್ಮಲ್ಲಿ ಸ್ಥಾಪನೆಯಾಗಲಿವೆ ಎಂದು ಹೇಳಿದರು.

hospital madhusudhan sai

ಹೀಲಿಂಗ್ ಲಿಟಲ್ ಹಾರ್ಟ್ ಸಂಸ್ಥೆಯ ಅಧ್ಯಕ್ಷ ಡಾ.ಸಂಜೀವ್ ನಿಚಾನಿ ಮಾತನಾಡಿ, ಕಳೆದ 7 ತಿಂಗಳಲ್ಲಿ 5 ಬಾರಿ ಇಲ್ಲಿಗೆ ಬಂದಿದ್ದೇನೆ. 23 ದೇಶಗಳಲ್ಲಿ 80 ಸಾವಿರ ಚಿಕಿತ್ಸೆಗಳನ್ನು ನೀಡಿದ್ದೇವೆ. ಭಾರತದಲ್ಲಿ ಇದು ನಮ್ಮ 5ನೇ ಶಿಬಿರ. ಉಚಿತ ಸೇವೆ ಮಾಡುತ್ತಿರುವ ಸಂಸ್ಥೆಯ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ. ಇದಕ್ಕೆ ಸತ್ಯ ಸಾಯಿ ಸಂಸ್ಥೆ ದೊಡ್ಡ ಉದಾಹರಣೆಯಾಗಿದೆ ಎಂದು ಹೊಗಳಿದರು.

ಮಕ್ಕಳ ಹಿರಿಯ ತಜ್ಞ ರೋಮನ್ ಮಾತನಾಡಿ, ಈ ಶಿಬಿರ 12 ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದೇನೆ. 15 ಜನ ಹೃದಯ ತಜ್ಞರು, 5 ಜನ ಅನಸ್ತೇಶಿಯಾ ತಜ್ಞರು ಹಾಗು ಇತರೆ ವೈದ್ಯರ ತಂಡ ಈ ಶಿಬಿರದಲ್ಲಿ ಸೇವೆ ಸಲ್ಲಿಸಿದ್ದು, ವ್ಯವಸ್ಥಿತವಾದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ : ಗೌರಿಬಿದನೂರು | ನಾಳೆ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ; ಸಿಎಂ ಸಿದ್ದರಾಮಯ್ಯ ಚಾಲನೆ

ಮಕ್ಕಳ ತಜ್ಞರಾದ ಡಾ.ಬಿ.ಆರ್.ಜಗನ್ನಾಥ್, ಡಾ.ಇವಾರಿಸ್‌, ಡಾ.ಪೀಟರ್‌, ಡಾ.ಮಿಹಾ, ಡಾ.ಲೆಸ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ಡಾ.ಸತೀಶ್ ಬಾಬು, ಡಾ.ಸಂಜಯ್, ಸಾರ್ವಜನಿಕ ಸಂಪರ್ಕಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...