ಯುಬಿಡಿಟಿ ಉಳಿಸಿ ಅಭಿಯಾನ: ದಾವಣಗೆರೆ ಬಂದ್ ಭಾಗಶಃ ಯಶಸ್ವಿ

Date:

ಯುಬಿಡಿಟಿ ಉಳಿಸಿ ಅಭಿಯಾನದಡಿ ಎಐಡಿಎಸ್ಓ ಮತ್ತು ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ದಾವಣಗೆರೆ ಬಂದ್ ಭಾಗಶಃ ಯಶಸ್ವಿಯಾಗಿದ್ದು, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಲ್ಪಟ್ಟಿದ್ದವು. ವಾಹನಗಳ ಸಂಚಾರ ಎಂದಿನಂತೆ ಸಾಮಾನ್ಯವಾಗಿತ್ತು.

‘ಯುಬಿಡಿಟಿ ಉಳಿಸಿ, ಪೇಮೆಂಟ್ ಸೀಟು ನಿಲ್ಲಿಸಲು’ ಒತ್ತಾಯಿಸಿ ನಡೆಸಿದ ದಾವಣಗೆರೆ ಬಂದ್ ಪ್ರತಿಭಟನೆಯ ಸಮಯದಲ್ಲಿ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಯುಬಿಡಿಟಿ ಉಳಿಸಿ, ಪೇಮೆಂಟ್ ಸೀಟ್ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಎಐಡಿಎಸ್ಒ ದಾವಣಗೆರೆ ಬಂದ್‌ಗೆ ಕರೆ ನೀಡಿತ್ತು. ಇದಕ್ಕೆ ಯುಬಿಡಿಟಿ ವಿದ್ಯಾರ್ಥಿಗಳ ಹೋರಾಟ ಸಮಿತಿ, ರೈತ ಸಂಘಟನೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
dvg

ಬಂದ್ ಹಿನ್ನೆಲೆಯಲ್ಲಿ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಎಐಡಿಎಸ್ ಒ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಶಶಿಕಲಾ, ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಸುಮನ್, ಭಾರತಿ, ಪರಶುರಾಮ, ನಾಗಸ್ಮಿತ, ಅನಿಲ್ ಹಾಗೂ ಹಲವು ರಾಜ್ಯ ನಾಯಕರನ್ನೊಳಗೊಂಡಂತೆ ಯುಬಿಡಿಟಿ ವಿದ್ಯಾರ್ಥಿ ಹೋರಾಟ ಸಮಿತಿಯ ವಿದ್ಯಾರ್ಥಿಗಳನ್ನು, ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಬಂಧನದ ವೇಳೆ ಸರ್ಕಾರದ ಮತ್ತು ಭ್ರಷ್ಟ ವ್ಯವಸ್ಥೆಯ ವಿರುದ್ದ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ರಾಜ್ಯ ಸರ್ಕಾರ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದೆ. ಈ ನಡೆ ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಯುಬಿಡಿಟಿ ರಾಜ್ಯದ ಏಕೈಕ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು. ಬಡ, ಮಧ್ಯಮ ವರ್ಗದ ಜನರ ಮಕ್ಕಳಿಗೆ ಆಶಾಕಿರಣವಾಗಿದೆ. ಇದನ್ನೂ ಕೂಡ ಸರ್ಕಾರ ಖಾಸಗೀಕರಣಗೊಳಿಸಲು ಹೊರಟಿದೆ. ಇದರ ವಿರುದ್ಧ ಹೋರಾಟ ನಡೆಸಲು ಮುಂದಾದರೆ ಪ್ರತಿಭಟನೆ ನಡೆಸುವವರನ್ನು ಬಂಧಿಸಿ ಹಕ್ಕನ್ನು ಕಿತ್ತುಕೊಳ್ಳುವ ಸರ್ಕಾರದ ನಡೆಗೆ ನಮ್ಮ ವಿರೋಧ ಇದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

dvg2

ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸೀಟುಗಳನ್ನು ಸಂಪೂರ್ಣವಾಗಿ ಬಡ ವಿದ್ಯಾರ್ಥಿಗಳಿಗೆ ಮೀಸಲಿರಿಸದೆ, ಶೇಕಡ 50ರಷ್ಟು ಸೀಟುಗಳನ್ನು ಆಡಳಿತ ಮಂಡಳಿಯಿಂದ ಪೇಮೆಂಟ್ ಸೀಟುಗಳಾಗಿ ಮಾರಾಟ ಮಾಡಲು ನಿರ್ಧರಿಸಿರುವುದು ಬಡವರ ,ಹಿಂದುಳಿದವರ, ಮಧ್ಯಮ ವರ್ಗದವರ ಮಕ್ಕಳ, ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕನ್ನು ಕಸಿದುಕೊಂಡಂತಾಗಿದೆ. ಒಂದೆಡೆ ಸರಕಾರವೇ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡುತ್ತದೆ. ಇನ್ನೊಂದೆಡೆ ಇದೆಲ್ಲದನ್ನು ವಿರೋಧಿಸಿದ ವಿದ್ಯಾರ್ಥಿಗಳನ್ನು ಬಂಧಿಸಲಾಗುತ್ತದೆ. ಇದು ರಾಜ್ಯ ಸರಕಾರ ವಿದ್ಯಾರ್ಥಿಗಳ ಹೋರಾಟದ ಹಕ್ಕಿನ ಮೇಲೆ ಮಾಡುತ್ತಿರುವ ದಮನಕಾರಿ ನೀತಿಯಾಗಿದೆ. ಈ ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಎಐಡಿಎಸ್‌ಒ ರಾಜ್ಯ ಸಮಿತಿಯು ಆಗ್ರಹಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...