ಮೈಸೂರು | ‘ಹಜಾಮ’ ಪದ ಬಳಕೆ; ಸಿ ಟಿ ರವಿ ವಿರುದ್ಧ ಸವಿತಾ ಸಮಾಜದಿಂದ ಪ್ರತಿಭಟನೆ

Date:

ಮೈಸೂರಿನ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ಎಸ್. ಮುತ್ತುರಾಜು ನೇತೃತ್ವದಲ್ಲಿ, ಸವಿತಾ ಸಮಾಜದ ಬಂಧುಗಳು ಬಿಜೆಪಿಯ ಸಿ.ಟಿ. ರವಿ ಮಾತಿನ ಭರದಲ್ಲಿ ‘ಹಜಾಮ’ ಪದ ಬಳಕೆ ಮಾಡಿರುವುದನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.

ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ಎಸ್. ಮುತ್ತುರಾಜು ಮಾತನಾಡಿ, “ಸಿ.ಟಿ. ರವಿಯವರ ನೀಚತನ ಇದೇನು ಮೊದಲಲ್ಲ. ಹಜಾಮ ಪದ ಬಳಕೆ ಮಾಡುತ್ತಿರುವುದು ಇದು ಎರಡನೆಯ ಸಲ. ತಮ್ಮಲ್ಲಿರುವ ಕೊಳಕುತನವನ್ನ ಸವಿತಾ ಸಮಾಜದ ಬಂಧುಗಳನ್ನು ‘ಹಜಾಮ’ ಎನ್ನುವ ಮೂಲಕ ಜಾತಿ ನಿಂದನೆ ಮಾಡಿ ಅವಮಾನಿಸುವುದು ತರವಲ್ಲ. ಇದನ್ನ ಸಮಾಜ ಎಂದಿಗೂ ಸಹಿಸುವುದಿಲ್ಲ. 24 ಗಂಟೆಯೊಳಗೆ ಸವಿತಾ ಸಮಾಜದವರಲ್ಲಿ ಸಿ.ಟಿ. ರವಿ ಕ್ಷಮೆ ಕೊರಬೇಕು. ಇಲ್ಲದಿದ್ದಲ್ಲಿ. ರಾಜ್ಯದಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

” ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ದೂರು ನೀಡಲಾಗುವುದು. ಇದರ ಜೊತೆಗೆ ದಲಿತರಿಗೆ ಜಾತಿ ನಿಂದನೆಯದಾಗ ಯಾವ ರೀತಿಯಲ್ಲಿ ಅಟ್ರಾಸಿಟಿ ಕಾಯ್ದೆ ಅನ್ವಯ ಆಗುತ್ತದೆಯೋ, ಅದೇ ರೀತಿಯಲ್ಲಿ ಸವಿತಾ ಸಮಾಜದ ಬಗ್ಗೆ ಲಘುವಾಗಿ ಮಾತನಾಡಿದಾಗ ಬಳಕೆಯಾಗುವಂತೆ ಕಾಯ್ದೆ ರೂಪಿಸುವಂತೆ ಕೋರಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿ.ಟಿ. ರವಿ ಈ ಹಿಂದೆಯೂ ಜಾತಿ ನಿಂದನೆ ಮಾಡಿದ್ದರು. ಮತ್ತದೇ ತಪ್ಪನ್ನು ಎಸಗಿದ್ದಾರೆ. ಸವಿತಾ ಸಮಾಜದ ನಿಂದನೆ ಮಾಡುವುದು ಚಟವಾಗಿದೆ. ತಮ್ಮಲ್ಲಿರುವ ನೀಚತನ ಆಗಾಗ ಹೊರ ಹಾಕುವ ಇಂತಹ ಕೀಳುಮಟ್ಟದ ರಾಜಕಾರಣಿಗಳಿಗೆ ರಾಜ್ಯದಲ್ಲಿ ಬುದ್ದಿಕಲಿಸಲಾಗುವುದು. ಸವಿತಾ ಸಮಾಜದ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಎಚ್ಚರಿಕೆಯಿಂದ, ಗೌರವದಿಂದ ನಡೆದುಕೊಳ್ಳುವುದನ್ನು ಕಲಿಯಬೇಕು. ಇದನ್ನೆಲ್ಲಾ ಬಿಟ್ಟು ನಾಲಿಗೆ ಹರಿಬಿಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವನ್ಯಜೀವಿ ಸಂರಕ್ಷಣೆ-ಜನರ ಭದ್ರತೆ ಮಹತ್ವದ್ದಾಗಿದೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿ. ಜೆ. ವಿಜಯ್ ಕುಮಾರ್ ಸೇರಿದಂತೆ ಇನ್ನಿತರ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...