ಬಯೋಮೆಟ್ರಿಕ್ ಹೆಸರಲ್ಲಿ ವಿದ್ಯಾರ್ಥಿವೇತನ ವಂಚಿಸುವ ಕ್ರಮ ಸರಿಯಲ್ಲ : ಎಸ್ಐಓ ಖಂಡನೆ

Date:

  • ಎನ್.ಎಸ್.ಪಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಕಡ್ಡಾಯ ಆದೇಶ
  • ಅರ್ಹ ವಿದ್ಯಾರ್ಥಿಗಳಿಗೂ ಬಯೋಮೆಟ್ರಿಕ್ ದೃಢೀಕರಣ ಮಾಡಬೇಕು ಎನ್ನುವುದು ಅವೈಜ್ಞಾನಿಕ

ವಿದ್ಯಾರ್ಥಿವೇತನ ಅಕ್ರಮದ ನೆಪದಲ್ಲಿ ಎನ್‌ಎಸ್‌ಪಿ(NSP)ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಂಡಲ್ಲಿ ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಹರಾಗುತ್ತಾರೆ ಎನ್ನುವುದು ವಿದ್ಯಾರ್ಥಿ ವಿರೋಧಿ ನಡೆ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್‌ಐಓ) ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರವು ಈ ಪ್ರಕರಣದಲ್ಲಿ ಅನಗತ್ಯವಾಗಿ ವಿದ್ಯಾರ್ಥಿಗಳನ್ನು ಎಳೆದು ತಂದು ಅರ್ಹ ಅಭ್ಯರ್ಥಿಗಳನ್ನು ವಿದ್ಯಾರ್ಥಿವೇತನದಿಂದ ವಂಚನೆಗೊಳಿಸುವ ಷಡ್ಯಂತ್ರ ಹೊಂದಿದೆ ಎಂಬುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಳ್ಳುವ ಕ್ರಮವು ಅನಗತ್ಯವಾಗಿ ವಿದ್ಯಾರ್ಥಿಗಳನ್ನು ತೊಂದರೆಗೀಡು ಮಾಡಿದೆ. ಇಡೀ ಪ್ರಕರಣದಲ್ಲಿ ಆರೋಪ ಹೊತ್ತುಕೊಂಡಿರುವ ಶಿಕ್ಷಣ ಸಂಸ್ಥೆಗಳ ಪರಿಶೀಲನೆ ನಡೆಸಿದ ಮೇಲೆಯೇ ಸಕ್ರಮವಿರುವ ಸಂಸ್ಥೆಗಳ ವಿದ್ಯಾರ್ಥಿಗಳಿಗೂ ಬಯೋಮೆಟ್ರಿಕ್ ದೃಢೀಕರಣ ಮಾಡಬೇಕು ಎನ್ನುವುದು ಅವೈಜ್ಞಾನಿಕವಾದುದು‌. ಇದು ತೀರಾ ದುರುದ್ದೇಶದಿಂದ ಕೂಡಿದ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ವಿದ್ಯಾರ್ಥಿಗಳು ಆಯಾ ಕಾಲೇಜುಗಳಲ್ಲಿ ದೃಢೀಕರಣ ಮಾಡಿಕೊಳ್ಳಲು ಸರ್ವರ್ ಸಮಸ್ಯೆ ಎದುರಾಗುತ್ತಿದ್ದು, ಇನ್ನೂ ಅನೇಕ ವಿದ್ಯಾರ್ಥಿಗಳು ದೃಢೀಕರಣ ಮಾಡಿಕೊಂಡಿಲ್ಲ. ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು ಅಗಸ್ಟ್ 25ನೇ ತಾರಿಖಿನ ವರೆಗೆ ಅಂತಿಮ ದಿನಾಂಕವನ್ನು ನಿಗದಿಗೊಳಿಸಿದ್ದು, ರಾಜ್ಯದಲ್ಲಿ ಅಂದಾಜು 3,69,000 ವಿದ್ಯಾರ್ಥಿಗಳು ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಳ್ಳಬೇಕು ಎಂದು ಎಸ್.ಎಮ್.ಎಸ್ ಸಂದೇಶ ರವಾನೆ ಆಗಿದೆ. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮಾಹಿತಿ ಪ್ರಕಾರ ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ 50 ಸಾವಿರ ಸಹ ದಾಟಿಲ್ಲ. ಹೀಗಿರುವಾಗ ಕೊನೆಯ ದಿನಾಂಕ ನಿಗದಿ ಮಾಡಿದ್ದು, ಒಂದೇ ವೇಳೆ ದಿನಾಂಕ ವಿಸ್ತರಣೆ ಆಗದೆ ಇದ್ದಲ್ಲಿ ರಾಜ್ಯದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ಹೊರಗುಳಿಯಲಿದ್ದಾರೆ. ಇದು ಅತ್ಯಂತ ಗಂಭೀರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣವನ್ನು ಪೊರೈಸಲು ಮತ್ತು ಉನ್ನತ ಶಿಕ್ಷಣದ ಕಲಿಕೆಗೆ ಉತ್ತೇಜನ ನೀಡಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ ಅಡಿಯಲ್ಲಿ ನೀಡಲಾಗುತ್ತಿದ್ದ ಸ್ಕಾಲರ್ಶಿಪ್ ಸಹಾಯದಿಂದ ತಮ್ಮ ವ್ಯಾಸಂಗವನ್ನು ಪೂರ್ಣಗೊಳಿಸುತ್ತಿದ್ದರು. ಇದೀಗ ಕೇಂದ್ರ ಸರ್ಕಾರವು ಈ ಪ್ರಕರಣದ ನೆಪದಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿದೆ. ಬಿಜೆಪಿ ಆಡಳಿತದ ಕೇಂದ್ರ ಸರ್ಕಾರವು ಈ ಹಿಂದಿನ ವರ್ಷ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸಹ ನಿಲ್ಲಿಸಿ, ಅದಕ್ಕಾಗಿ ಆರ್‌ಟಿಇ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಿತ್ತು. ಇದರಿಂದ ದೇಶದ ಕೋಟಿಗಟ್ಟಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ಕುಂಠಿತಗೊಂಡಿದೆ ಎಂದು ಎಸ್‌ಐಓ ತಿಳಿಸಿದೆ.

ಈ ಹಗರಣವನ್ನು ಮುಂದಿಟ್ಟುಕೊಂಡು ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ವಿದ್ಯಾರ್ಥಿ ವೇತನ ನೀಡುವುದು ತಡವಾಗಬಾರದು ಅಥವಾ ಈ ನೆಪದಲ್ಲಿ ಯೋಜನೆ ನಿಲ್ಲಿಸಕೂಡದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕೇಂದ್ರ ಸರ್ಕಾರವು ಬಯೋಮೆಟ್ರಿಕ್ ದೃಢೀಕರಣ ಮಾಡಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಿಸಿ, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಅಥವಾ ಈ ಬಯೋಮೆಟ್ರಿಕ್ ದೃಢೀಕರಣ ಕ್ರಮವನ್ನು ಈ ಬಾರಿಗೆ ಮಾತ್ರ ನಿಲ್ಲಿಸಿ, ಮುಂದಿನ ವರ್ಷದ ಅರ್ಜಿ ಸಲ್ಲಿಕೆ ಅವಧಿಯಲ್ಲಿ ಕಡ್ಡಾಯಗೊಳಿಸಬಹುದು ಎಂದು ಎಸ್.ಐ.ಓ ಕರ್ನಾಟಕವು ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...