ಉಡುಪಿ | ಜಿಲ್ಲೆಗೆ ಸರಕಾರಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜು ಬೇಕು – ಎಸ್ ಡಿಪಿಐ

Date:

2025-26 ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಅನ್ನು ಮಾರ್ಚ್ ತಿಂಗಳಲ್ಲಿ ಸಿದ್ಧರಾಮಯ್ಯ ನವರು ಮಂಡಿಸಲಿದ್ದು ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಪೂರೈಸಲು ಬಜೆಟ್ ನಲ್ಲಿ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ನಝೀರ್ ಅಹಮದ್ ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿಯಾದ ನಿಯೋಗ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳಾದ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜುಗಳನ್ನು ನಿರ್ಮಿಸಬೇಕು, ಜಿಲ್ಲೆಯಲ್ಲಿ ಸುಮಾರು ಎಂಟು ಶೇಕಡಾ ದಷ್ಟು ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಪ್ರತಿ ತಾಲೂಕುಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಬೇಕು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ವಸತಿ ಶಾಲೆಗಳನ್ನು ನಿರ್ಮಿಸಬೇಕು, ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು. ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು, ದೇಶದಲ್ಲೇ ಖ್ಯಾತಿಯನ್ನು ಗಳಿಸಿರುವ ಜಿಲ್ಲೆಯ ವಿಶೇಷ ಕೃಷಿಗಳಾದ ಮಟ್ಟು ಗುಳ್ಳ ಹಾಗೂ ಉಡುಪಿ ಮಲ್ಲಿಗೆ ಬೆಳೆಗಳಿಗೆ ಪ್ರೋತ್ಸಾಹ ನೀಡಬೇಕು ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಅಭಿವೃದ್ಧಿಗೆ ಅನುದಾನವನ್ನು ಮೀಸಲಿಡಬೇಕು ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಮುಖಂಡರಾದ ಹಸೈನಾರ್ ಕಟಪಾಡಿ, ಎಸ್ ಡಿ ಪಿ ಐ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಅಶ್ರಫ್ ಬಾವ, ಉಪಾಧ್ಯಕ್ಷರಾದ ರಹೀಮ್ ಆದಿಉಡುಪಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...