ಬೀದರ್‌ | ಸಮರ್ಪಕ ಮೂಲಭೂತ ಸೌಕರ್ಯ ಒದಗಿಸಲು ಎಸ್‌ಡಿಪಿಐ ಆಗ್ರಹ

Date:

ಹುಮನಾಬಾದ್‌ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್‌ಗಳಲ್ಲಿ ಕೆಲವು ದಿನಗಳಿಂದ ಮೂಲಭೂತ ಸೌಕರ್ಯಗಳಾದ ಬೀದಿದೀಪ,ಕುಡಿಯುವ ನೀರು, ಗಟಾರು ಸ್ವಚ್ಛತೆ ಕಾರ್ಯವನ್ನು ಪುರಸಭೆ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಎಸ್‌ಡಿಪಿಐ ಆರೋಪಿಸಿದೆ.

ಈ ಕುರಿತು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಶೇಖ ಮಕ್ಸೂದ್ ನೇತ್ರತ್ವದಲ್ಲಿ ಸೋಮವಾರ ಪಟ್ಟಣದ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, “ಪಟ್ಟಣದಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರು ಒದಗಿಸುವ ಕಾರಣ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಟ್ಯಾಂಕರ್‌ ನೀರು ಖರೀದಿಸಿ ಕುಡಿಯುವ ಪರಿಸ್ಥಿತಿ ಎದುರಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪಟ್ಟಣದಲ್ಲಿ ಅನೇಕ ಸ್ಲಂ, ವಾರ್ಡ್‌ಗಳಲ್ಲಿ ಇಲ್ಲಿಯವರೆಗೆ ಚರಂಡಿ ಸ್ವಚ್ಛಗೊಳಿಸಿಲ್ಲ. ಚರಂಡಿಗಳು ಕಸದಿಂದ ಪೂರ್ತಿ ಭರ್ತಿಯಾಗಿವೆ. ಸ್ವಲ್ಪ ಮಳೆಯಾದರೆ ಸಾಕು ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿವೆ, ರಸ್ತೆ ಮೇಲೆ ಹರಿಯುತ್ತಿವೆ. ಅವ್ಯವಸ್ಥೆಯಿಂದ ಸುತ್ತಲಿನ ಜನರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಪಟ್ಟಣದ ವಿವಿಧೆಡೆ ಬೀದಿ ದೀಪ ಅಳವಡಿಸದ ಕಾರಣ ಅನಾಹುತಗಳು ಸಂಭವಿಸುತ್ತಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕವಾಗಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಈಗಲಾದರೂ ಅಧಿಕಾರಿಗಳು ಪಟ್ಟಣದ ಎಲ್ಲ ವಾರ್ಡ್‌ಗಳಿಗೆ ಖುದ್ದು ಭೇಟಿ ನೀಡಿ ಸಮಸ್ಯೆಗಳು ಆಲಿಸಿ ವಾರದೊಳಗೆ ಎಲ್ಲ ಸಮಸ್ಯೆಗಳು ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಪುರಸಭೆ ಕಚೇರಿ ಎದುರು ಉಗ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ : ವಿಕ್ರಮ ವಿಸಾಜಿ

ಈ ಸಂದರ್ಭದಲ್ಲಿ ಎಸ್‌ಡಿಪಿಐ ಪ್ರಮುಖರಾದ ಸೈಯದ್ ಅಕ್ಬರ್,‌ ಸೈಯದ್ ಮೈಬೂಬ್ ಸಾಬ್ಮ ಸೈಯದ್ ವಾಸಿಂ, ಆದಿಲ್  ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...