ಚನ್ನಪಟ್ಟಣ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

Date:

ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯಾದ್ಯಂತ ಕರೆ ನೀಡಿದ್ದ ಪ್ರತಿಭಟನೆಗೆ ಚನ್ನಪಟ್ಟಣದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಗುರುವಾರ ಚನ್ನಪಟ್ಟಣ ತಹಸೀಲ್ದಾರ್ ಕಚೇರಿ ಎದುರು ನೂರಾರು ಎಸ್‌ಡಿಪಿಐ ಕಾರ್ಯಕರ್ತರು ಮತ್ತು ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದರು.

ಚನ್ನಪಟ್ಟಣ ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ ಎಸ್‌ಡಿಪಿಐ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಎಸ್‌ಡಿಪಿಐ1

ಈ ವೇಳೆ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮ್ಜದ್ ಶರೀಫ್, ಈ ಮಸೂದೆ ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದ್ದು, ಅಸಾಂವಿಧಾನಿಕ ಮತ್ತು ಪಕ್ಷಪಾತಪೂರ್ಣವಾಗಿದೆ. ಸರ್ಕಾರವು ಜನರ ಅಭಿಪ್ರಾಯವನ್ನು ಪರಿಗಣಿಸದೆ, ತನ್ನಿಚ್ಚೆಯಂತೆ ನಿರ್ಧಾರ ಕೈಗೊಳ್ಳುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಡಬ್ಲೂಸಿ ಸದಸ್ಯ ಸಲೀಂ ಪಾಷಾ ಮಾತನಾಡಿ, ವಕ್ಫ್ ಆಸ್ತಿಗಳನ್ನು ಮುಸ್ಲಿಂ ಸಮುದಾಯದ ಕಲ್ಯಾಣಕ್ಕಾಗಿ ಬಳಸಬೇಕಾಗಿರುವಾಗ, ಈ ತಿದ್ದುಪಡಿ ಇದಕ್ಕೆ ವಿರುದ್ಧವಾಗಿದೆ. ಇದೊಂದು ದೊಡ್ಡ ಕುತಂತ್ರ ಎಂದು ಆರೋಪಿಸಿದರು.

ಎಸ್‌ಡಿಪಿಐ12

ಇದೇ ವೇಳೆ ತಿದ್ದುಪಡಿ ಮಸೂದೆಯನ್ನು ಕೂಡಲೇ ವಾಪಾಸ್ ಪಡೆಯುವಂತೆ ಒತ್ತಾಯಿಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೆಟ್ರೋ ದರ ಏರಿಕೆ- ‘ಸತ್ತಂತೆಯೂ ಅತ್ತಂತೆಯೂ’ ಆಡುತ್ತಿರುವ ಈ ನಾಟಕ ನಿಲ್ಲಲಿ

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಜ್ಹರ್ ಪಾಷಾ, ಚನ್ನಪಟ್ಟಣ ತಾಲ್ಲೂಕು ಉಪಾಧ್ಯಕ್ಷ ಮೊಹಮ್ಮದ್ ಫಾಜಿಲ್, ರಾಮನಗರ ವಿಧಾನಸಭಾ ಅಧ್ಯಕ್ಷ ಮಹಬೂಬ್ ಪಾಷಾ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...