ಉಡುಪಿ | ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡ

Date:

ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡನ ಮುಸ್ಲಿಂ ವಿರೋಧಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಇಂದು ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

1005925539

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಹನೀಫ್ ಮೂಳೂರ್ ಕಾಂಗ್ರೆಸ್ ಸರಕಾರ ಮುಸ್ಲಿಮರ ವೋಟ್ ಪಡೆದು ನಿರಂತರವಾಗಿ ಮುಸ್ಲಿಮರ ವಿರುದ್ಧವೇ ಕೆಲಸ ಮಾಡಿದೆ. ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧವನ್ನು ಹಿಂಪಡೆಯುತ್ತೇವೆ ಎಂದು ಹೇಳಿದ್ದ ಸಿದ್ಧರಾಮಯ್ಯ ಅಧಿಕಾರ ಹಿಡಿದು 2 ವರ್ಷವಾದರೂ ಅದರ ಬಗ್ಗೆ ಮಾತೆತ್ತುತ್ತಿಲ್ಲ. ಒಂದು ವೇಳೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಶಾಸಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸದಿದ್ದರೆ ತೀವ್ರ ಹೋರಾಟವನ್ನು ನಡೆಸುವುದಾಗಿ ಎಚ್ಚರಿಸಿದರು.

ಎಸ್ ಡಿ ಪಿ ಐ ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಂ ಆದಿ ಉಡುಪಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್, ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವ ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲ ಹಾಗೂ ಮತ್ತಿತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...