ಉಡುಪಿ | ಶಿಕ್ಷಣ, ಕೃಷಿ, ಮೀನುಗಾರರಿಗೆ ಹೆಚ್ಚುವರಿ ಅನುದಾನಕ್ಕೆ ಎಸ್ ಡಿಪಿಐ ಒತ್ತಾಯ

Date:

2026–27ನೇ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ “ಜನತಾ ಬಜೆಟ್” ಮಾದರಿಯನ್ನು ಅನುಸರಿಸಿ ಶೋಷಿತ ವರ್ಗಗಳ ಪರವಾದ ಯೋಜನೆಗಳನ್ನು ಘೋಷಿಸಿ ಜಾರಿಗೊಳಿಸಬೇಕು ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ಇಂದು ಉಡುಪಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು. ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು, ಕಾಂಗ್ರೆಸ್ ಪಕ್ಷವು 2023ರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 134 ಆಶ್ವಾಸನೆಗಳು ಇನ್ನೂ ಸಂಪೂರ್ಣವಾಗಿ ಈಡೇರಿಲ್ಲವೆಂದು ವಿಷಾದ ವ್ಯಕ್ತಪಡಿಸಿದರು. ಪ್ರಸ್ತುತ ಬಜೆಟ್‌ನಲ್ಲಿ ಎಲ್ಲಾ ಭರವಸೆಗಳನ್ನು ಘೋಷಿಸಿ, ಅನುಷ್ಠಾನಗೊಳಿಸುವ ಸ್ಪಷ್ಟ ಕಾರ್ಯಯೋಜನೆ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದರು.

ಎಸ್‌ಡಿಪಿಐ ರಾಜ್ಯ ಮಟ್ಟದಲ್ಲಿ ಸಿದ್ಧಪಡಿಸಿರುವ “ಜನತಾ ಬಜೆಟ್” ಅನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಬಜೆಟ್ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ದಲಿತರು, ರೈತರು, ಮಹಿಳೆಯರು, ಕಾರ್ಮಿಕರು ಸೇರಿದಂತೆ ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಆದ್ಯತೆ ನೀಡುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಹಕ್ಕೊತ್ತಾಯಗಳು

ಶಿಕ್ಷಣ: ರಾಜ್ಯ ಬಜೆಟ್‌ನ ಕನಿಷ್ಠ 20% ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟು, ಸರ್ಕಾರಿ ಶಾಲೆಗಳ ಆಧುನೀಕರಣಕ್ಕೆ ₹10,000 ಕೋಟಿ, ಉರ್ದು ಶಾಲೆಗಳಿಗೆ ₹2,000 ಕೋಟಿ ಅನುದಾನ ನೀಡಬೇಕು. ಸಂಪೂರ್ಣ ಉಚಿತ ಶಿಕ್ಷಣ, ಶಿಕ್ಷಕರ ವೇತನ ಹೆಚ್ಚಳ ಹಾಗೂ ಖಾಲಿ ಹುದ್ದೆಗಳ ಭರ್ತಿ ಮಾಡಬೇಕು.

ಭೂಮಿ-ವಸತಿ : ಭೂಹೀನ SC/ST/OBC ಹಾಗೂ ಅಲ್ಪಸಂಖ್ಯಾತರಿಗೆ ತಕ್ಷಣ ಭೂಮಿ ಹಕ್ಕುಪತ್ರ ನೀಡಬೇಕು. PMAY ಸಹಾಯಧನವನ್ನು ₹5 ಲಕ್ಷದಿಂದ ₹7 ಲಕ್ಷಕ್ಕೆ ಹೆಚ್ಚಿಸಬೇಕು.

ಕಾರ್ಮಿಕರು-ಯುವಕರು: ಯುವನಿಧಿ ಮೊತ್ತವನ್ನು ₹5,000ಕ್ಕೆ ಏರಿಸಬೇಕು. ಅಸಂಘಟಿತ ಕಾರ್ಮಿಕರಿಗೆ ₹1,000 ಕೋಟಿ ಮೀಸಲು ಹಾಗೂ ಕನಿಷ್ಠ ವೇತನದಲ್ಲಿ 20% ಹೆಚ್ಚಳ ಮಾಡಬೇಕು.

ರೈತರು-ಕೃಷಿ: ಕೃಷಿ ಕ್ಷೇತ್ರಕ್ಕೆ ₹60,000 ಕೋಟಿ ಮೀಸಲಿಟ್ಟು, ಸಣ್ಣ ರೈತರ ಸಾಲವನ್ನು ₹2 ಲಕ್ಷದವರೆಗೆ ಮನ್ನಾ ಮಾಡಬೇಕು. MSP ಜಾರಿಗೊಳಿಸಿ, ನೀರಾವರಿ ಅಭಿವೃದ್ಧಿಗೆ ₹1,000 ಕೋಟಿ ಅನುದಾನ ನೀಡಬೇಕು.

ಆರೋಗ್ಯ: ಆರೋಗ್ಯ ಕ್ಷೇತ್ರದ ಅನುದಾನವನ್ನು ದುಪ್ಪಟ್ಟು ಮಾಡಿ, ಜಿಲ್ಲಾ ವೈದ್ಯಕೀಯ ಕಾಲೇಜುಗಳು ಹಾಗೂ ವಿಶೇಷ ಆಸ್ಪತ್ರೆಗಳನ್ನು ಸ್ಥಾಪಿಸಬೇಕು. 108 ಆಂಬುಲೆನ್ಸ್ ಸೇವೆಯನ್ನು ನವೀಕರಿಸಬೇಕು.

ಸಾಮಾಜಿಕ ಭದ್ರತೆ: ಪಿಂಚಣಿಯನ್ನು ದುಪ್ಪಟ್ಟು ಮಾಡಬೇಕು. ವಿಪತ್ತು ಪರಿಹಾರ ನಿಧಿಯನ್ನು ₹5,000 ಕೋಟಿಗೆ ಹೆಚ್ಚಿಸಿ, ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರಿಗೆ ₹50,000 ಹಾಗೂ ಮನೆ ನಷ್ಟಕ್ಕೆ ₹5 ಲಕ್ಷ ಪರಿಹಾರ ನೀಡಬೇಕು.

ಇದರ ಜೊತೆಗೆ ಗ್ರಾಮೀಣಾಭಿವೃದ್ಧಿಗೆ 5% ಮೀಸಲು, MSMEಗಳಿಗೆ ₹5,000 ಕೋಟಿ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹15,000 ಕೋಟಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ₹7,000 ಕೋಟಿ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದರು.

1009842259

ಉಡುಪಿ ಜಿಲ್ಲೆಯ ಪ್ರಮುಖ ಬೇಡಿಕೆಗಳು

1) ಸರ್ಕಾರಿ ವೈದ್ಯಕೀಯ ಕಾಲೇಜು: ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹಲವು ವರ್ಷಗಳ ಬೇಡಿಕೆಯಾಗಿದೆ. ಈಗಾಗಲೇ ನಿವೇಶನ ಗುರುತಿಸಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ಈ ಬಜೆಟ್‌ನಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಜೊತೆಗೆ ಜಿಲ್ಲೆಯಲ್ಲೇ ಸರ್ಕಾರಿ ಸ್ನಾತಕೋತ್ತರ ಕಾಲೇಜುಗಳನ್ನು ಸ್ಥಾಪಿಸಬೇಕು.

2) ಜಿಲ್ಲಾ ಆಸ್ಪತ್ರೆ ಕಾಮಗಾರಿ: ಉಡುಪಿಯಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಜಿಲ್ಲಾ ಆಸ್ಪತ್ರೆ ಕಟ್ಟಡ ಕಾಮಗಾರಿ ವೇಗವಾಗಿ ಪೂರ್ಣಗೊಳ್ಳಲು ಅಗತ್ಯ ಅನುದಾನ ಮಂಜೂರು ಮಾಡಬೇಕು. ಎಲ್ಲಾ ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಬೇಕು.

3) ಕೃಷಿ ಅಧ್ಯಯನ ಕೇಂದ್ರ: ಬ್ರಹ್ಮಾವರ ಕೃಷಿ ಅಧ್ಯಯನ ಕೇಂದ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡಬೇಕು.

4) ನಿರುದ್ಯೋಗ ಸಮಸ್ಯೆ: ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಐಟಿ ಹಬ್ ಸ್ಥಾಪನೆಗೆ ಯೋಜನೆ ರೂಪಿಸಿ, ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು.

5) ಮೀನುಗಾರರ ಸಮಸ್ಯೆ: ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ಹೆಚ್ಚಳ, ಲೈಫ್ ಜಾಕೆಟ್ ಖರೀದಿಗೆ ಸಹಾಯಧನ ಹಾಗೂ ಮಳೆಗಾಲದ ಅವಧಿಯಲ್ಲಿ ಭತ್ಯೆ ಒದಗಿಸಬೇಕು.

6) ಹಾಜಿ ಅಬ್ದುಲ್ಲಾ ಆಸ್ಪತ್ರೆ: ಆಸ್ಪತ್ರೆಯ ಸಮರ್ಪಕ ನಿರ್ವಹಣೆ ಹಾಗೂ ತಜ್ಞ ವೈದ್ಯರು, ಸಿಬ್ಬಂದಿ ನೇಮಕಕ್ಕೆ ಅನುದಾನ ಬಿಡುಗಡೆ ಮಾಡಬೇಕು.

7) ಗ್ರಾಮೀಣ ಸಾರಿಗೆ: ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚಿಸಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸಬೇಕು.

8) ಮಳೆ ಹಾನಿ ಪರಿಹಾರ: ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಬೈಂದೂರು, ಕುಂದಾಪುರ, ಹೆಬ್ರಿ, ಕಾರ್ಕಳ ಭಾಗಗಳಲ್ಲಿ ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಗೆ ತೀವ್ರ ಹಾನಿಯಾಗಿದೆ. ಸಮಸ್ಯೆ ಪರಿಹಾರಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಹನೀಫ್ ಮುಳೂರು, ಪ್ರಧಾನ ಕಾರ್ಯದರ್ಶಿ ರಝಾಕ್ ವೈ.ಎಸ್ ಹಾಗೂ ಶಂಶುದ್ದೀನ್, ಶಾಹಿದ್ ಅಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...