ದ್ವಿತೀಯ ಪಿಯುಸಿ | ಶೇ. 78 ರಷ್ಟು ಫಲಿತಾಂಶ ಗಳಿಸಿದ ಬಿಬಿಎಂಪಿ ಕಾಲೇಜುಗಳು

Date:

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಶಿಕ್ಷಣ ಇಲಾಖೆಯಲ್ಲಿನ 18 ಪದವಿ ಪೂರ್ವ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2,427 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1889 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.78ರಷ್ಟು ಫಲಿತಾಂಶ ಬಂದಿದೆ” ಎಂದು ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪಾಲಿಕೆ, “ಬಿಬಿಎಂಪಿ ಭೈರವೇಶ್ವರ ನಗರ ಪದವಿ ಪೂರ್ವ ಕಾಲೇಜು ಶೇ.94.96% ಫಲಿತಾಂಶವನ್ನು ಪಡೆದು ಅಗ್ರಸ್ಥಾನದಲ್ಲಿದೆ. ಪಾಲಿಕೆಗೆ ಕೀರ್ತಿ ತಂದಿದೆ. ಒಟ್ಟು 29 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ” ಎಂದು ತಿಳಿಸಿದೆ.

ಬಿಬಿಎಂಪಿ ಪದವಿ ಪೂರ್ವ ಕಾಲೇಜು ಕಸ್ತೂರಿಬಾ ನಗರ ಶೇ.88.10 ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದಿದೆ. ಒಟ್ಟು 36 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಬಿಬಿಎಂಪಿಯ ಪದವಿ ಪೂರ್ವ ಕಾಲೇಜು ಕಾವೇರಿಪುರ ಶೇ.87.69 ಫಲಿತಾಂಶವನ್ನು ಪಡೆದು ಮೂರನೇ ಸ್ಥಾನವನ್ನು ಗಳಿಸಿದೆ. ಒಟ್ಟು 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ ಪರೀಕ್ಷೆ-2 ಅಂತಿಮ ವೇಳಾಪಟ್ಟಿ ಬಿಡುಗಡೆ

“2022-23ನೇ ಸಾಲಿನಲ್ಲಿ ಶೇ.63.18% ರಷ್ಟು ಫಲಿತಾಂಶ ಬಂದಿದೆ. ಪ್ರಸ್ತುತ ವರ್ಷದಲ್ಲಿ ಕಳೆದ ವರ್ಷಕ್ಕಿಂತ ಶೇಕಡ 15% ರಷ್ಟು ಹೆಚ್ಚು ಫಲಿತಾಂಶ ಬಂದಿದ್ದು, ಪಾಲಿಕೆಯ ಪದವಿ ಪೂರ್ವ ಕಾಲೇಜುಗಳ ಫಲಿತಾಂಶವು ಉತ್ತಮಗೊಂಡಿದೆ. 2023-24ನೇ ಸಾಲಿನಲ್ಲಿ ಒಟ್ಟು 227 ವಿದ್ಯಾರ್ಥಿಗಳು ಶೇಕಡ 85% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ” ಎಂದಿದೆ.

ಕ್ಲೀವ್ ಲ್ಯಾಂಡ್ ಟೌನ್-62 2. ಕಸ್ತೂರಿಬಾ ನಗರ-36, 3. ಭೈರವೇಶ್ವರ ನಗರ-28, 4. ಶ್ರೀರಾಂಪುರ-25 ವಿದ್ಯಾರ್ಥಿಗಳು ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ” ಎಂದು ಶಿಕ್ಷಣ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ರವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...