ಕಲಬುರಗಿ| ಅಮಿತ್‌ ಶಾ ಹೇಳಿಕೆ ಖಂಡಿಸಿ ಸೇಡಂ ಬಂದ್‌ ಯಶಸ್ವಿ

Date:

ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆಯನ್ನು ಖಂಡಿಸಿ, ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಸಂವಿಧಾನ ರಕ್ಷಣಾ ಸಮಿತಿ ಕರೆ ಕೊಟ್ಟ ಸೇಡಂ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಕೋತ್ತಲ ಬಸವೇಶ್ವರ ದೇವಸ್ಥಾನದಿಂದ ಬಸವೇಶ್ವರ ವೃತದವರೆಗೆ ಅಮೀತ್ ಶಾ ಅವರ ಅಣಕು ಶವಯಾತ್ರೆ ಮೆರವಣಿಗೆ ನಡೆಸಿ ರಾಜೀನಾಮೆಗೆ ಆಗ್ರಹಿಸಿದರು. ಬಳಿಕ ಬಸವೇಶ್ವರ ವೃತ್ತದಲ್ಲಿ ಅಮಿತ್‌ ಶಾ ಪ್ರತಿಕೃತಿ ದಹಿಸಿದರು. ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಿದರು.

ಸಮಿತಿಯ ಮುಖಂಡ ಮಹಾಂತಪ್ಪ ಸಂಗಾವಿ ಮಾತನಾಡಿ, “ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೀಳಾಗಿ ಮಾತನಾಡಿದ್ದು ತೀವ್ರವಾಗಿ ಖಂಡಿಸುತ್ತೇವೆ. ಸಂವಿಧಾನ ಅಡಿಯಲ್ಲಿ ಗೆದ್ದು ಗೃಹ ಮಂತ್ರಿಯಾದ ಶಾ ಅಂಬೇಡ್ಕರ್‌ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೇಶದ ಜನತೆಗೆ ಕ್ಷಮೆಯಾಚಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 10 at 10.27.20 AM

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿದ ಅಮೀತ್ ಶಾ ಅವರ ಹೇಳಿಕೆ ಸಹಿಸಲಾಗದು. ಅವರನ್ನು ಸಂಪುಟದಿಂದ ವಜಾಗೊಳಿಸಿ, ದೇಶದ್ರೋಹ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್‌ ಅನುಯಾಯಿಗಳು ದೇಶದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ ಬಂದ್ ಯಶಸ್ವಿ | ಅಮಿತ್ ಶಾ ರಾಜೀನಾಮೆ ನೀಡದಿದ್ದರೆ ‘ಚಲೋ ಪಾರ್ಲಿಮೆಂಟ್’ ಎಚ್ಚರಿಕೆ

ಪ್ರತಿಭಟನೆಯಲ್ಲಿ ಪ್ರಮುಖರಾದ ರಾಮಯ್ಯ, ಪೂಜಾರಿ, ಸಾಜೀದ್ ಖಾನ್, ಶೇಖ ಆದಂ, ರಾಜು ಹಡಪದ, ಶಂಭುಲಿಂಗ ನಾಟೀಕರ್, ಶಿವಶರಣರೆಡ್ಡಿ, ಮಾರುತಿ ಕೊಡಂಗಲಕರ್, ಜೈಭೀಮ ಊಡಗಿ, ವಿಲಾಸೆ ಗೌತಮ್ ರಾಜು ಚವ್ಹಾಣ, ಜಗನ್ನಾಥ ಚಿಂತಪಳ್ಳಿ, ಅಬ್ದುಲ್ ಗಪ್ಪುರ, ರಾಜು ನೀಲಂಗಿ, ಸತೀಶ್‌ ಪೂಜಾರಿ, ನಾಗೇಂದ್ರಪ್ಪಾ ಸೇಡಂ, ಸೈಯದ್‌ ನಾಜೀಂ, ಹಾದ್‌ ನಾಜೀಂ, ಅರುಣಕುಮಾರ ಮೂಡಬಾಳಕರ್, ಬಸವರಾಜ ಕಾಳಗಿ, ಸಿದು ಡೊಣ್ಣೂರ್, ಅಂಬರೀಶ್, ಸೈಯದ್ ಶಮಶೋದಿನ್ , ಬಸವರಾಜ ಮುತ್ತಂಗಿಕರ್, ಭೀಮಶಂಕರ ಕೋರವಿ, ಮೈಲಾರಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...