ಜಮಾಅತೆ ಇಸ್ಲಾಮಿ ಹಿಂದ್ ಮುಖಂಡ, ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಕೆ.ಎಂ. ಶರೀಫ್ ನಿಧನ

Date:

ಜಮಾಅತೆ ಇಸ್ಲಾಮಿ ಹಿಂದ್‌ ಕರ್ನಾಟಕ ರಾಜ್ಯ ಸಲಹಾ ಸಮಿತಿ ಸದಸ್ಯರಾಗಿದ್ದ ಮತ್ತು ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಹಿರಿಯ ನಾಯಕ ಕೆ.ಎಂ. ಶರೀಫ್ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮಂಗಳೂರಿನ ಬಂದರ್ ಸಮೀಪದ ಕಂದಕ್‌ನಲ್ಲಿ ಹುಟ್ಟಿ ಬೆಳೆದ ಇವರು, ಸನ್ಮಾರ್ಗ ವಾರ ಪತ್ರಿಕೆಯ ಸ್ಥಾಪಕರಲ್ಲಿ ಓರ್ವರಾಗಿದ್ದರು. ಇವರು ಸನ್ಮಾರ್ಗ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ಇಬ್ರಾಹೀಮ್ ಸಈದ್ ಅವರ ಅಣ್ಣನಾಗಿದ್ದಾರೆ.

ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ಸ್ಥಾನೀಯ ಘಟಕಕ್ಕೆ 20 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಸನ್ಮಾರ್ಗ ಪಬ್ಲಿಕೇಶನ್ ಟ್ರಸ್ಟ್‌ನ ಪ್ರಥಮ ಚೇರ್ಮನ್ ಆಗಿಯೂ ಕರ್ತವ್ಯ ನಿಭಾಯಿಸಿದ್ದರು. 1978ರಲ್ಲಿ ಸನ್ಮಾರ್ಗ ಪತ್ರಿಕೆಯನ್ನು ಪ್ರಾರಂಭಿಸುವುದಕ್ಕೆ ಮತ್ತು ಅದರ ಬೆಳವಣಿಗೆಗೆ ಶಕ್ತಿಮೀರಿ ಪ್ರಯತ್ನಿಸಿದವರಲ್ಲಿ ಇವರು ಒಬ್ಬರಾಗಿದ್ದಾರೆ. ಕೆಲವೇ ಕೆಲವು ಗೆಳೆಯರನ್ನ ಒಟ್ಟು ಸೇರಿಸಿ ಪ್ರತಿಯೊಬ್ಬರೂ ತಲಾ 500 ರೂಪಾಯಿಯಂತೆ ಹೂಡಿಕೆ ಮಾಡಿ ಸನ್ಮಾರ್ಗ ಪತ್ರಿಕೆಯನ್ನು ಸ್ಥಾಪಿಸಲಾಗಿತ್ತು ಮತ್ತು ಅದರ ಹಿಂದಿನ ಚಾಲಕ ಶಕ್ತಿಯಾಗಿ ಗುರುತಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೊಕ್ಕೊಟ್ಟು ಬಬ್ಬುಕಟ್ಟೆಯಲ್ಲಿರುವ ಹಿರಾ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಚೇರ್ಮೆನ್ ಆಗಿದ್ದ ಇವರು ಸಮರ್ಥ ನಾಯಕತ್ವ, ದೂರ ದೃಷ್ಟಿ ಮತ್ತು ಸಂಘಟನಾ ಚಾತುರ್ಯವನ್ನು ಹೊಂದಿದ್ದರು.

ಇವರು ಪತ್ನಿ, ಐದು ಗಂಡು ಮಕ್ಕಳು ಮತ್ತು ಓರ್ವ ಹೆಣ್ಣು ಮಗಳನ್ನು ಅಗಲಿದ್ದಾರೆ. ಇವರ ಪುತ್ರರಾದ ಅಷ್ಪಾಕ್ ಅಹಮದ್ ಶರೀಫ್ ಅವರು ಈ ಹಿಂದೆ ಎಸ್ಐಒ ರಾಷ್ಟ್ರಾಧ್ಯಕ್ಷರಾಗಿದ್ದರು. ಹಾಗೆಯೇ ಔರಾ ಮಾಸಿಕದ ಸಂಪಾದಕಿಯಾಗಿರುವ ಸಮೀನಾ ಆಫ್ಶಾನ್ ಇವರ ಮಗಳಾಗಿದ್ದಾರೆ. ಸನ್ಮಾರ್ಗದ ಉಪಸಂಪಾದಕರಾಗಿದ್ದ ಮತ್ತು ಉತ್ತಮ ಬರಹಗಾರರಾಗಿಯೂ ಭಾಷಣಗಾರರಾಗಿಯೂ ಗುರುತಿಸಿಕೊಂಡಿರುವ ಬಿ.ಎಸ್. ಶರ್ಫುದ್ದೀನ್ ಇವರ ಅಳಿಯರಾಗಿದ್ದಾರೆ.

ಇದನ್ನು ಓದಿದ್ದೀರಾ? ಶಾಸಕ ರೈ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಗಡೀಪಾರಿಗೆ ಕ್ರಮ: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ

ಕೆ.ಎಂ. ಶರೀಫ್ ಅವರ ನಿಧನಕ್ಕೆ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಅಧ್ಯಕ್ಷ ಬೆಳಗಾಮಿ ಮುಹಮ್ಮದ್ ಸಾದ್, ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ, ಅಕ್ಬರ್ ಅಲಿ ಉಡುಪಿ, ನಗರಾಧ್ಯಕ್ಷ ಕೆ.ಎಂ. ಅಶ್ರಫ್, ಸನ್ಮಾರ್ಗ ಪಬ್ಲಿಕೇಶನ್ ಟ್ರಸ್ಟ್‌ನ ಅಧ್ಯಕ್ಷ ಸಯೀದ್ ಇಸ್ಮಾಈಲ್, ಪ್ರಕಾಶಕ ಅಮೀನ್ ಅಹ್ಸನ್, ಅನುಪಮ ಸಂಪಾದಕಿ ಶಹನಾಝ್ ಎಂ, ಮೌಲಾನಾ ಯಹ್ಯಾ ತಂಙಳ್‌ ಮದನಿ ಸಹಿತ ಅನೇಕರು ಸಂತಾಪ ಸೂಚಿಸಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಗೆ ಅಂತಿಮ ಸಂಸ್ಕಾರ ಕಾರ್ಯವು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...