ಕಲಬುರಗಿ | ಪ್ರತ್ಯೇಕ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

Date:

ಬೈಕ್‌ಗೆ ಕೆಕೆಆರ್‌ಟಿಸಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ- ಶಹಾಪುರ ರಸ್ತೆಯ ಚಿಕ್ಕಮುಧೋಳ ಕ್ರಾಸ್ ಹತ್ತಿರ ಸೋಮವಾರ ನಡೆದಿದೆ.

ಜೇವರ್ಗಿ ಪಟ್ಟಣದ ಲಕ್ಷ್ಮೀ ಚೌಕ್ ನಿವಾಸಿ ಮೌನೇಶ್ ಭೀಮರಾಯ ವಿಶ್ವಕರ್ಮ (38) ಮೃತರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಇನ್ನಿಬ್ಬರು ಬೈಕ್ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಮೌನೇಶ್ ಸೇರಿ ಮೂವರು ಬೈಕ್ ಮೇಲೆ ಜೇವರ್ಗಿ ಕಡೆಗೆ ಹೊರಟಿದ್ದರು. ಶಹಾಪುರ ಕಡೆಯಿಂದ ಹೊರಟಿದ್ದ ಬಸ್ ಡಿಕ್ಕಿ ಹೊಡೆದ ಹಿನ್ನಲೆ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ; ಬೈಕ್‌ ಸವಾರ ಸಾವು :

ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಸಮೀಪದ ನಂದಿಕೂರ ತಾಂಡಾ ಕ್ರಾಸ್ ಬಳಿಯ ಬ್ರಿಜ್ ಹತ್ತಿರ ನಡೆದಿದೆ.

ಸೀತನೂರ ಗ್ರಾಮದ ಸಾವನಕುಮಾರ (25) ಮೃತರು. ಬೈಕ್‌ ಹಿಂಬದಿ ಕುಳಿತ ಹುಸೇನ್ ಪಟೇಲ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವನಕುಮಾರ ಮತ್ತು ಹುಸೇನ್ ಪಟೇಲ್ ಅವರು ಬೈಕ್ ಮೇಲೆ ಕಲಬುರಗಿ ಕಡೆಯಿಂದ ಸೀತನೂರ ಕಡೆಗೆ ಹೊರಟಿದ್ದರು. ನಂದಿಕೂರ ತಾಂಡಾ ಕ್ರಾಸ್ ಬ್ರಿಜ್ ಬಳಿ ಕಲಬುರಗಿ ಕಡೆಯಿಂದ ಜೇವರ್ಗಿ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಯಂತ್ರಣ ಬೋರ್ಡ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ತಗ್ಗಿನಲ್ಲಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಸಾವನಕುಮಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹುಸೇನ್ ಪಟೇಲ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಗಾಯಗೊಂಡ ಹುಸೇನ್ ಪಟೇಲ್ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...