ಬೀದರ್ | ಸೆ.15ಕ್ಕೆ ರಾಜ್ಯಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆ : ಸಚಿವ ಈಶ್ವರ ಖಂಡ್ರೆ

Date:

ನಮ್ಮ ಸರಕಾರದ ತೀರ್ಮಾನದಂತೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆ.15ರಂದು ಕರ್ನಾಟಕ ರಾಜ್ಯದಾದ್ಯಂತ ವಿನೂತನವಾಗಿ ಆಚರಿಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಒಟ್ಟು 2,800 ಕಿ.ಮೀ. ಮಾನವ ಸರಪಳಿ ರಚಿಸಲಾಗುತ್ತಿದೆ’ ಎಂದರು.

‘ಜಗತ್ತಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬಸವಕಲ್ಯಾಣದ ಅನುಭವ ಮಂಟಪದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿರುವುದು ವಿಶೇಷವಾಗಿದೆ. ಬಸವಕಲ್ಯಾಣದಿಂದ ಬೀದರ್ ಜಿಲ್ಲೆಯ ಗಡಿ ಗ್ರಾಮ ಹಳ್ಳಿಖೇಡ(ಕೆ)ವರೆಗೆ ಒಟ್ಟು 45 ಕಿ.ಮೀ. ಆಗಲಿದ್ದು, 40 ಸಾವಿರ ಜನರು ಇದರಲ್ಲಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ಕುರಿತು ಈಗಾಗಲೇ ಅಧಿಕಾರಿಗಳು ಸುಮಾರು ಸಭೆಗಳನ್ನು ಮಾಡಿದ್ದಾರೆ. ಇದರಲ್ಲಿ ಜನಪ್ರತಿನಿಧಿಗಳು, ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಸಂಘ- ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು, ಸರಕಾರಿ ನೌಕರರು, ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ’ ಎಂದರು.

‘ಸಂವಿಧಾನದ ಆಶಯದಂತೆ ಸ್ವಾತಂತ್ರ‍್ಯ, ಸಮಾನತೆ, ಭಾತೃತ್ವ ಮತ್ತು ವಿವಿಧತೆಯಲ್ಲಿ ಏಕತೆ ನಮ್ಮ ಸಂವಿಧಾನದ ಆಶಯಗಳನ್ನು ಅನುಷ್ಠಾನಕ್ಕೆ ತರುವುದಾಗಿದೆ. ಈ ಕುರಿತು ನಮ್ಮ ಮಕ್ಕಳಿಗೆ ಜಾಗೃತಿ ಮೂಡಿಸುವದರ ಜೊತೆಗೆ ದ್ವೇಷ, ಅಸೂಯೆ ಮತ್ತು ಮತಾಂಧತೆಯನ್ನು ಹೋಗಲಾಡಿಸುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಬೇಕಿದೆ. ಅದಕ್ಕೆ ಪೂರಕವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಸೆ.15 ರಂದು ಬೆಳಿಗ್ಗೆ 8:30 ಕ್ಕೆ ಬಸವಕಲ್ಯಾಣ ಅನುಭವ ಮಂಟಪದಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. 45 ಕಿ.ಮೀ. ಮಾನವ ಸರಪಳಿ ರಚಿಸುವುದರ ಜೊತೆಗೆ 1 ಕಿ.ಮೀ ಉದ್ದದ ನಮ್ಮ ರಾಜ್ಯದ ಧ್ವಜ ಹಾಗೂ ರಾಷ್ಟ್ರದ ಧ್ವಜವನ್ನು ಹಿಡಿದು ಮಕ್ಕಳು ಮುನ್ನಡೆಯುವರು. ಇದರಲ್ಲಿ ಸಂವಿಧಾನದ ಪೀಠಿಕೆಯ ವಾಚನ ಇರುತ್ತದೆ. ಹಾಗಾಗಿ ಜಿಲ್ಲೆಯ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ‌ ಖಾನ್, ಹುಮನಾಬಾದ ಶಾಸಕ ಡಾ. ಸಿದ್ದಲಿಂಗಪ್ಪ ಎನ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಡಾ. ಎಂ.ಜಿ. ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬ್ಯಾಲಹಳ್ಳಿ(ಕೆ) ಗ್ರಾಮ ಪಂಚಾಯತಿ ಅಧ್ಯಕ್ಷ ಅಶೋಕ ಜಾಧವ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಸಿಇಓ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಸಿಂಧು ಎಚ್.ಎಸ್. ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...