ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಶುಕ್ರವಾರ ಬೆಳಿಗ್ಗೆ ಹಲವಾರು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು ಕನಿಷ್ಠ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಎಂ ಸತ್ಯವಾರ ಗ್ರಾಮದ ಬಳಿ ಹೊಸಕೋಟೆ ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್, ಕಾರು ಮತ್ತು ಕ್ಯಾಂಟರ್ ಟ್ರಕ್ ನಡುವೆ ಸರಣಿ ಅಪಘಾತ ನಡೆದಿದೆ.
ಇದನ್ನು ಓದಿದ್ದೀರಾ? ದಟ್ಟ ಮಂಜಿನಿಂದ ಸರಣಿ ಅಪಘಾತ; ಹೊತ್ತಿ ಉರಿದ 7 ಬಸ್‌ಗಳು
ಎಸ್‌ಯುವಿ ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮುಂದೆ ಇದ್ದ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸರಣಿ ಅಪಘಾತ ನಡೆದಿದೆ ಎಂದು ವರದಿಯಾಗಿದೆ.
ಕಾರಿನಲ್ಲಿದ್ದ 6 ಜನ ಬೈಕ್‌ನಲ್ಲಿದ್ದ ಓರ್ವ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಕಾರಿನಲ್ಲಿದ್ದ ಮೃತರನ್ನು ಅಶ್ವಿನ್ ನಾಯರ್, ಈತನ್ ಜಾರ್ಜ್, ಅರ್ಹನ್ ಶರೀಫ್, ಐಯಾನ್ ಅಲಿ ಮತ್ತು ಭರತ್ ಎಂದು ಗುರುತಿಸಲಾಗಿದ್ದು ಮೃತರೆಲ್ಲರೂ ಅಪ್ರಾಪ್ತರಾಗಿದ್ದಾರೆ. ಬೈಕ್‌ನಲ್ಲಿದ್ದ ದೇವನಾಯಕನಹಳ್ಳಿ ಮೂಲದ ಗಗನ್(24) ಎಂಬ ಯುವಕನೂ ಸಾವನ್ನಪ್ಪಿದ್ದಾನೆ.
ಅತಿವೇಗದ ಚಾಲನೆಯೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





