ತುರುವೇಕೆರೆ ತಾಲೂಕಿನಲ್ಲಿ ಸರಣಿ ಕಳ್ಳತನ : ಸೈನಿಕನ ಮನೆಗೇ ಕನ್ನ ಹಾಕಿದ ಕಳ್ಳರು

Date:

ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಮತ್ತು ದಬ್ಬೇಘಟ್ಟ ಹೋಬಳಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದ ಜನತಾ ಕಾಲೋನಿಯ ನಿವಾಸಿಯಾಗಿರುವ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಣ್ಣನವರ ಕುಟುಂಬದವರು ನೆಂಟರ ಮನೆಗೆ ತೆರಳಿದ್ದ ವೇಳೆ ಕಳ್ಳರು ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ ಸುಮಾರು 1.60 ಲಕ್ಷ ರೂಪಾಯಿ ನಗದು ಮತ್ತು 25 ಗ್ರಾಂ ಆಭರಣಗಳ ಕಳವು ಮಾಡಿ ಪರಾರಿಯಾಗಿದ್ದಾರೆ. ಆದರೆ ಮನೆಯಲ್ಲಿದ್ದ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ಗಳನ್ನು ಕಳ್ಳರು ಅಲ್ಲೇ ಬಿಟ್ಟು ಹೋಗಿದ್ದಾರೆ.

 ದಬ್ಬೇಘಟ್ಟ ಹೋಬಳಿಯ ಮಾವಿನಕೆರೆ ಗ್ರಾಮದಲ್ಲಿ 5 ಮನೆಗಳಿಗೆ ಕಳ್ಳರು ನುಗ್ಗಿದ್ದಾರೆ. ಮಾವಿನಕೆರೆಯ ಮಂಜುನಾಥ್ ಅವರ ಮನೆಯ ಪಕ್ಕದ ಶೆಡ್ಡಿನಲ್ಲಿ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಜಯಶಂಕರ್ ರವರ ಮನೆಗೆ ನುಗ್ಗಿರುವ ಕಳ್ಳರು ಸುಮಾರು 80 ಸಾವಿರ ರೂ ನಗದು ಕಳವು ಮಾಡಿದ್ದಾರೆ. ಮನೆಗೆ ಬೀಗ ಹಾಕಿದ್ದ ಅದೇ ಗ್ರಾಮದ ಈಶ್ವರ್ ಎಂಬುವವರ ಮನೆಯ ಬೀಗ ಮುರಿದು ಮನೆ ನುಗ್ಗಲು ಪ್ರಯತ್ನಿಸಿದ್ದಾರೆ. ಆದರೆ ಅದು ವಿಫಲವಾಗಿದೆ. ಲಿಂಗಮ್ಮ ಎಂಬುವವರ ಮನೆಗೆ ನುಗ್ಗಿರುವ ಕಳ್ಳರು ಒಂದುವರೆ ಸಾವಿರ ರೂಗಳನ್ನು ಕದ್ದಿದ್ದಾರೆ. ನಂತರ ಬ್ಯಾಡರಹಳ್ಳಿಯ ರಾಜಣ್ಣ ಎಂಬುವವರಿಗೆ ಸೇರಿದ ಬೈಕ್ ನ್ನು ಕದ್ದಿದ್ದರು. ಆದರೆ ಬೈಕ್ ನಲ್ಲಿ ಪೆಟ್ರೋಲ್ ದಾರಿ ಮಧ್ಯೆ ಖಾಲಿಯಾದ ಕಾರಣ ಊರ ಹೊರಗಿನ ರಸ್ತೆಯಲ್ಲಿ ನಿಲ್ಲಿಸಿ ಹೋಗಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ನಂತರ ಅರಳಹಳ್ಳಿಯಲ್ಲಿ ಬೀಗ ಹಾಕಿದ್ದ ಮನೆಯ ಬೀಗ ಮುರಿದಿದ್ದಾರೆ. ಆದರೆ ಮನೆಗೆ ನುಗ್ಗಲು ಸಾಧ್ಯವಾಗಿಲ್ಲ. ಒಟ್ಟಾರೆ ಈ ಮರ‍್ನಾಲ್ಕು ಗ್ರಾಮಗಳಲ್ಲಿ ಬೀಗ ಹಾಕಲಾಗಿದ್ದ ಮನೆಗಳನ್ನೇ ಕಳ್ಳರು ಟಾರ್ಗೆಟ್ ಮಾಡಿದ್ದಾರೆ.  ಕಳ್ಳತನ ಮಾಡಿರುವ ಖದೀಮರು ಕಪ್ಪು ಬಟ್ಟೆಯನ್ನು ಧರಿಸಿರುವುದು ಮತ್ತು ಮೂವರು ಕಳ್ಳತನ ಮಾಡಲು ಬಂದಿರುವುದು ಮಾಯಸಂದ್ರದ ಮನೆಯೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

 ಮನೆಯಲ್ಲಿ ಕಳ್ಳತನ ಮಾಡಿರುವ ಸಂಬಂಧ ಯೋಧರಾದ ಶಿವಣ್ಣನವರ ಪತ್ನಿ ಶಶಿಕಲಾ  ತುರುವೇಕೆರೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಕಳ್ಳತನವಾಗಿರುವ ಸ್ಥಳಗಳಿಗೆ ಸಿಪಿಐ ಲೋಹಿತ್, ಎಸ್ ಐ ಸಂಗಮೇಶ್ ಮೇಟಿ ಭೇಟಿ ನೀಡಿದ್ದರು. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ ನಡೆಸಿದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಗಳಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಕೂಡಲೇ ಪೋಲಿಸರು ಕಳ್ಳರನ್ನು ಪತ್ತೆ ಹಚ್ಚಿ ಸಾರ್ವಜನಿಕರ ಆತಂಕವನ್ನು ದೂರಮಾಡಬೇಕೆಂದು ಮಾವಿನಕೆರೆ ಗ್ರಾಮದ ಮಂಜಣ್ಣ ಒತ್ತಾಯಿಸಿದ್ದಾರೆ.

ವರದಿ – ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...