ಬೆಂಗಳೂರು | ಕಾರು, ಬಸ್‌, ಲಾರಿಗಳ ನಡುವೆ ಸರಣಿ ಅಪಘಾತ

Date:

ಮೂರು ಲಾರಿಗಳು, 1 ಸ್ಲೀಪರ್ ಬಸ್‌ ಹಾಗೂ ಒಂದು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.

ತಾಲೂಕಿನ ವೆಂಕಟಗಿರಿಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಸ್ಲೀಪರ್‌ ಬಸ್‌ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್‌ ಕ್ಲೀನರ್ ಮತ್ತು ಕ್ಯಾಂಟರ್‌ ಲಾರಿ ಚಾಲಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಮುಂಜಾನೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಕಾರು-ಲಾರಿಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ. ಲಾರಿಯ ಹಿಂದಿನಿಂದಲೇ ಬರುತ್ತಿದ್ದ ಬಸ್‌ ಹಾಗೂ ಇತರ ಎರಡು ಲಾರಿಗಳು ಕೂಡ ಅಪಘಾತವಾಗಿದ್ದ ಲಾರಿಗೆ ಡಿಕ್ಕಿ ಹೊಡೆದುಕೊಂಡಿವೆ. ಅಪಘಾತವನ್ನು ಕಂಡು ಕ್ಯಾಂಟರ್‌ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದು, ಕ್ಯಾಂಟರ್ ಪಲ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರಣಿ ಅಪಘಾತಕ್ಕೆ ಒಳಗಾದ ವಾಹನಗಳನ್ನು ತೆರವುಗೊಳಿಸಲಾಗುತ್ತಿದ್ದು, ಹೆದ್ದಾರಿಯಲ್ಲಿ ಒಂದು ಬದಿಯ ರಸ್ತೆಯನ್ನು ಬಂದ್‌ ಮಾಡಲಾಗಿದೆ. ಅಪಘಾತಕ್ಕೀಡಾದ ವಾಹನಗಳ ಪೈಕಿ ಇಬ್ಬರು ಚಾಲಕರು ತಮ್ಮ ವಾಹನಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...