ಅಧಿವೇಶನ-2023 | ಸಂವಿಧಾನ ಪೀಠಿಕೆ ಓದು ವಿಚಾರ, ಸಭಾಧ್ಯಕ್ಷರ ನಡೆಗೆ ಯತ್ನಾಳ್ ತೀವ್ರ ಆಕ್ಷೇಪ

Date:

16ನೇ ವಿಧಾನಸಭೆಯ ಮೊದಲ ದಿನದ ಅಧಿವೇಶನದಲ್ಲಿ ಸಂವಿಧಾನ ಪೀಠಿಕೆ ಓದು ವಿಚಾರವಾಗಿ ಸಭಾಧ್ಯಕ್ಷ ಯು ಟಿ ಖಾದರ್‌ ನಡೆಯನ್ನು ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ತೀವ್ರವಾಗಿ ಖಂಡಿಸಿದರು.

ಅಧಿವೇಶನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ಯು ಟಿ ಖಾದರ್ ಅವರು ಸಂವಿಧಾನದ ಮೂಲ ಪೀಠಿಕೆ ಪುಟವನ್ನು ಓದಿ ಹೇಳುವುದರ ಜೊತೆಗೆ ಎಲ್ಲರೂ ಅದನ್ನು ಮರು ಓದಿದರು. ಆದರೆ, ಆರಂಭದಲ್ಲೇ ಸಭಾಧ್ಯಕ್ಷರು ಓದಿದ ಮತ್ತು ಸದಸ್ಯರ ಕೈಯಲ್ಲಿ ನೀಡಿದ್ದ ಕಾಪಿ ಬೇರೆ ಬೇರೆಯಾಗಿತ್ತು. ಈ ವಿಚಾರಕ್ಕೆ ಯತ್ನಾಳ್‌ ಆಕ್ಷೇಪ ಎತ್ತಿದರು.

“ಸಭಾಧ್ಯಕ್ಷರೇ, ಓದಿದ ಸಂವಿಧಾನದ ಮೂಲ ಪೀಠಿಕೆಗೂ ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ಪೀಠಿಕೆಗೂ ವ್ಯತ್ಯಾಸವಿದೆ. ಇದು ಸರಿಯಲ್ಲ. ಸಂವಿಧಾದನ ಆಶಯ ಬದಲಾಗಬಾರದು. ಈ ನಡೆಯನ್ನು ನಾನು ಕಟುವಾಗಿ ಖಂಡಿಸುವೆ. ಇದು ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾದುದು. ಮೂಲ ಸಂವಿಧಾನದ ಪೀಠಿಕೆಯಲ್ಲಿ ಒಂದಕ್ಷರವೂ ಬದಲಾಗದಂತೆ ಬೋಧಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯತ್ನಾಳ್‌ ಮಾತಿಗೆ ಆಡಳಿತ ಪಕ್ಷದ ಸದಸ್ಯರೊಬ್ಬರು ಎದ್ದು ನಿಂತು, “ಬಿಜೆಪಿ ಸಂವಿಧಾನವನ್ನೇ ಬದಲಿಸಲು ಹೊರಟಿದ್ದನ್ನು ನಾವು ಮರೆತಿಲ್ಲ. ಭೂತದ ಬಾಯಲ್ಲಿ ಭಗವದ್ಗೀತೆ” ಎಂದು ವ್ಯಂಗ್ಯವಾಡಿದರು.

ಸಭಾಧ್ಯಕ್ಷರು ಮಧ್ಯ ಪ್ರವೇಶಿಸಿ, “ಬಿಜೆಪಿ ಸದಸ್ಯರ ಆಕ್ಷೇಪವನ್ನು ತೆಗೆದುಹಾಕದೆ ಅವರಿಗೆ ಸಮಾಧಾನ ಮಾಡುವಂತೆ ಮುಂದಿನ ದಿನಗಳಲ್ಲಿ ಈ ತಪ್ಪನ್ನು ಸರಿಪಡಿಸಿಕೊಳ್ಳಲಾಗುವುದು” ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡು ಅದನ್ನು ಅಲ್ಲಿಗೇ ಬಿಡಲು ಹಾಗೂ ಜನಪರ ಕೆಲಸ ಮಾಡುವ ವಿಷಯದ ಬಗ್ಗೆ ಗಮನ ಕೊಡಲು ಸದಸ್ಯರಲ್ಲಿ ಮನವಿ ಮಾಡಿಕೊಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ, “ಸಭಾಧ್ಯಕ್ಷರು ಓದಿದ ಸಂವಿಧಾನ ಪೀಠಿಕೆ ಪ್ರತಿಗೂ ಮತ್ತು ನಮಗೆ ಕೊಟ್ಟ ಪ್ರತಿಗೂ ವ್ಯತ್ಯಾಸವಿದೆ. ಆದರೆ, ಆಶಯ ಒಂದೇ ಎಂದು” ಸಮಜಾಯಿಷಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...