ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ; ಕೆರೆಯಂತಾದ ರಸ್ತೆಗಳು

Date:

ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವೆಡೆ ಭಾನುವಾರ ಮಳೆಯಾಗಿದ್ದು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾದ್ಯಂತ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ.

ಮಡಿಕೇರಿಯಲ್ಲಿ ಅರ್ಧ ಗಂಟೆ ಬಿರುಸಿನ ಮಳೆಯಾಯಿತು. ಸೋಮವಾರ ಪೇಟೆ, ವಿರಾಜಪೇಟೆ, ನಾಪೋಕ್ಲುವಿನಲ್ಲಿ ಸಾಧಾರಣ ಮಳೆಯಾಗಿದೆ.

ಮೈಸೂರು ನಗರದಲ್ಲಿ ರಾತ್ರಿ ಗುಡುಗು–ಸಿಡಿಲು ಸಹಿತ ಜೋರು ಮಳೆಯಾಯಿತು. ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು ಭಾಗದಲ್ಲಿ, ಹಾಸನ ಜಿಲ್ಲೆಯ ಹಲವೆಡೆಯೂ ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ ನಗರದಲ್ಲಿ ಸಂಜೆ ಅರ್ಧ ಗಂಟೆ ವರುಣನ ಆರ್ಭಟ ನಡೆಯಿತು. ಸಾಗರ ತಾಲೂಕಿನಲ್ಲಿ ಒಂದು ಗಂಟೆಗೂ ಹೆಚ್ಚು ಅವಧಿ ಮಳೆ ಸುರಿಯಿತು. ಗಾಳಿಯ ರಭಸಕ್ಕೆ ಆರು ಮನೆಗಳ ಮೇಲೆ ಮರ ಬಿದ್ದು ಹಾನಿ ಉಂಟಾಗಿದೆ. ಆನಂದಪುರ ಹಾಗೂ ಶಿಕಾರಿಪುರ ಸುತ್ತಮುತ್ತಲೂ ಮಳೆ ಸುರಿದಿದೆ.

ದಾವಣಗೆರೆಯಲ್ಲಿ ರಾತ್ರಿ ಸುಮಾರು ಅರ್ಧಗಂಟೆ ಜೋರು ಮಳೆ ಸುರಿಯಿತು. ನಗರದ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಸ್ಥಳೀಯರು ಸಂಕಷ್ಟ ಅನುಭವಿಸಿದರು. ಜಿಲ್ಲೆಯ ಕಡರನಾಯ್ಕನಹಳ್ಳಿ, ಮಲೇಬೆನ್ನೂರು, ಹರಿಹರ, ಹೊನ್ನಾಳಿಯಲ್ಲೂ ಮಳೆ ಸುರಿದಿದೆ.

ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭಾನುವಾರ ಸಂಜೆ ತಾಸಿಗೂ ಹೆಚ್ಚು ಮಳೆ ಸುರಿಯಿತು. ರಭಸದಿಂದ ಮಳೆ ಜೊತೆಗೆ ಗಾಳಿ, ಗುಡುಗು, ಸಿಡಿಲುಗಳ ಆರ್ಭಟವೂ ಜೋರಾಗಿತ್ತು. ಇದರಿಂದ ಕೆಲವೆಡೆ ರಸ್ತೆಗಳು ಹೊಳೆಯಂತೆ ಕಾಣತೊಡಗಿದ್ದವು.

ನಾಲ್ಕು ದಿನಗಳಿಂದ ಸಂಜೆಯಾದಂತೆಯೇ ಮಳೆ ಶುರುವಾಗುತ್ತಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ರಸ್ತೆಗಳು ಕೆರೆಯಂತಾಗುತ್ತಿವೆ.

ಹೆಚ್ಚಿನ ಕಡೆ ಒಳಚರಂಡಿಗಳು ಕಟ್ಟಿಕೊಂಡಿವೆ. ಕೆಲವು ಕಡೆ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಇದು ಪರಿಸ್ಥಿತಿಯನ್ನು ಬಿಗಡಾಯಿಸುವಂತೆ ಮಾಡಿದೆ. ಇದರಿಂದ ಕೊಳಚೆ ನೀರು ರಸ್ತೆ ಮೇಲೆ ಹರಿಯಿತು. ತಗ್ಗು ಪ್ರದೇಶದ ಮನೆಗಳಿಗೂ ಕೊಳಚೆ ನೀರು ನುಗ್ಗಿತು. ಕೆಲವು ಮನೆ ಹಾಗೂ ಮಳಿಗೆಗಳ ನೆಲಮಹಡಿಗಳಲ್ಲಿ ಮೊಳಕಾಲವರೆಗೆ ನೀರು ನಿಂತಿದ್ದು, ಪಂಪ್‌ಸೆಟ್‌ಗಳಿಂದ ಹೊರ ಹಾಕಲಾಯಿತು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭದ್ರಾವತಿ ಭದ್ರಾ ನದಿ ಪಾಲಾದ ಮಗ,ತಂದೆಗಾಗಿ ಶೋಧ

ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ಎರಡು–ಮೂರು ಅಡಿ ನೀರು ನಿಂತು ವಾಹನ ಸವಾರರು ಪರದಾಡಿದರು. ರಸ್ತೆಯಲ್ಲಿ ಹಲವು ಅಡಿ ನೀರು ನಿಂತ ಕಾರಣ ಮೈಲುಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...