ಬೀದರ್‌ | ಜಿಲ್ಲೆಯಲ್ಲಿ ಮೂರ್ನಾಲ್ಕು ದಿನ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ

Date:

ಭಾರತೀಯ ಹವಾಮಾನ ಇಲಾಖೆಯಿಂದ ಡಿ.18 ಜಿಲ್ಲೆಯನ್ನು ರೆಡ್‌ ಅಲರ್ಟ್ ಘೋಷಿಸಿದ್ದು, ಮುಂದಿನ ಮೂರ್ನಾಲ್ಕು ದಿನಗಳವರೆಗೆ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಮಾನ್ಯ ತಾಪಮಾನಕ್ಕಿಂತ 5-6 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಬೆಳಿಗ್ಗೆ ಸೂರ್ಯೋದಯಕ್ಕಿಂತ ಮುಂಚೆ, ಸೂರ್ಯಾಸ್ತದ ನಂತರ ವಾಕಿಂಗ್ ಬರುವವರು ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮಗಳಲ್ಲಿ ಸಾರ್ವಜನಿಕರು ಮತ್ತು ರೈತರು ಅನಾವಶ್ಯಕವಾಗಿ ದ್ವಿಚಕ್ರ ವಾಹನಗಳಲ್ಲಿ ಹೊರಗಡೆ ಬರಬಾರದು ಎಂದು ಜಿಲ್ಲಾಡಳಿತ ವಿನಂತಿಸಿದೆ ಎಂದರು.

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಹವಾಮಾನ ಸಂಪೂರ್ಣ ಬದಲಾಗಿದೆ. ಚಳಿಯ ಪ್ರಮಾಣ ಹೆಚ್ಚಾಗಿದೆ. ಕಳೆದ ಸೋಮವಾರ ರಾಜ್ಯದಲ್ಲಿಯೇ ಅತಿ ಕಡಿಮೆ ತಾಪಮಾನ ದಾಖಲಾಗಿತ್ತು. ಮುಂದಿನ ಮೂರ್ನಾಲ್ಕು ದಿನಗಳವರೆಗೆ ತಾಪಮಾನ 5 ರಿಂದ 6 ಡಿಗ್ರಿ ಸೆಲ್ಸಿಯಸ್‌ ಗೆ ಇಳಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವಾಲಯ ಪ್ರವೇಶಕ್ಕೆ ಅಂಗಲಾಚುವ ದಲಿತರಿಗೆ ಬಾಬಾಸಾಹೇಬರು ಹೇಳಿದ್ದ ಪಾಠಗಳೇನು?

ಸಾರ್ವಜನಿಕರು ಸಾಧ್ಯವಾದಷ್ಟು ಮನೆ ಬಿಟ್ಟು ಹೊರಗಡೆ ಬರದಿರಲು ತಿಳಿಸಿದೆ. ಒಂದು ವೇಳೆ ಅವಶ್ಯವಿದ್ದಲ್ಲಿ ಬೆಚ್ಚನೆಯ ಉಡುಪುಗಳಾದ ಸ್ಟೇಟರ್, ಜಾಕೇಟ್, ಉಲನ್ ಟೋಪಿ ಕಾಲುಕುಬಸ್, ಕೈಗ್ಲೌಸ್ ಗಳನ್ನು ಧರಿಸಲು ಸೂಚಿಸಿದೆ. ಮಕ್ಕಳನ್ನು ಮನೆಯಿಂದ ಹೊರಗಡೆ ಬಿಡದಿರಲು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...