ತುಮಕೂರು | ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ; ಯುವಕನ ಬಂಧನ

Date:

ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ಕುವೆಂಪುನಗರ ಐದನೇ ಕ್ರಾಸ್ ನಿವಾಸಿ ದರ್ಶನ್‌ ಬಂಧಿತ ಆರೋಪಿ.

ಸೆಪ್ಟೆಂಬರ್‌ 30ರಂದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಗಣಪತಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿತ್ತು. ಈ ಮೆರವಣಿಗೆಯಲ್ಲಿ ಆರೋಪಿ ದರ್ಶನ್‌ ಭಾಗವಹಿಸಿದ್ದ. ಈ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಜತೆ ಅನುಚಿತವಾಗಿ ನಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ತುಮಕೂರು ನಗರದ ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಎದೆಯ ಭಾಗಕ್ಕೆ ಕೈಹಾಕಿ ಎಳೆದಿರುವ ಬಗ್ಗೆ, ಮಹಿಳಾ ಪಿಎಸ್‌ಐ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರೋಪಿ ದರ್ಶನ್‌ ನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...