ಕಲಬುರಗಿ | ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ; ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Date:

ವಿದ್ಯಾರ್ಥನಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಪೌಜಿಯಾ ತರನ್ನುಮ್‌ ಆದೇಶಿಸಿದ್ದಾರೆ.

ಪ್ರಭುಗೌಡ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಶಾಲೆಯ ಐವರು ವಿದ್ಯಾರ್ಥಿನಿಯರು ಲಿಖಿತ ದೂರು ಸಲ್ಲಿಸಿದರು.ಈ ಕುರಿತು ಜಂಟಿ ತಪಾಸಣಾ ವರದಿ ನೀಡುವಂತೆ ಜಿಲ್ಲಾಧಿಕಾರಿ ಪೌಜಿಯಾ ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ಪ್ರಭು ದೊರೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೀದ್ ಕರಂಗಿ ಅವರನ್ನು ಸೂಚಿಸಿದರು.

ತನಿಖೆಗಾಗಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಲ್ವರು ವಿದ್ಯಾರ್ಥಿನಿಯರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ತಿಳಿಸಿದರು. ಈ ವರದಿ ಆಧರಿಸಿ ಶಿಕ್ಷಕ ಪ್ರಭುಗೌಡ ಅವರನ್ನು ಅಮಾನತುಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...