ಯಾದಗಿರಿ | ಕರ್ನಾಟಕ ಒನ್‌ನಲ್ಲಿ ಬಸ್ ಪಾಸ್ ವಿತರಣೆಗೆ ಹೆಚ್ಚಿನ ಹಣ ವಸೂಲಿ; ಆರೋಪ

Date:

ನಾಕರಿಕ ಸೇವೆಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಕರ್ನಾಟಕ ಸರ್ಕಾರವು ‘ಕರ್ನಾಟಕ ಒನ್’ಅನ್ನು ಆರಂಭಿಸಿದೆ. ಆದರೆ, ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಸೇವೆಗಳನ್ನು ಒದಗಿಸಲು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಯಾದಗಿರಿ ಜಿಲ್ಲೆಯ ಶಹಾಪುರದ ಬಸವೇಶ್ವರ ವೃತ್ತದಲ್ಲಿರುವ ‘ಕರ್ನಾಟಕ ಒನ್’ನಲ್ಲಿ ಬಸ್‌ ಪಾಸ್‌ ವಿತರಣೆಗೆ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭವಾದ ಕಾರಣ, ಕರ್ನಾಟಕ ಒನ್‌ನಲ್ಲಿ ಬಸ್‌ ಪಾಸ್ ಮಾಡಿಸಿಕೊಳ್ಳುತ್ತಿದ್ದಾರೆ. ಅಂತೆಯೇ, ಶಹಾಪುರ ತಾಲೂಕಿನ ವಿದ್ಯಾರ್ಥಿಗಳು ಬಸ್‌ ಪಾಸ್‌ಗೆ ಅರ್ಜಿ ಸಲ್ಲಿಸಿದ್ದಾಗ, ಸರ್ಕಾರಿ ಶುಲ್ಕಕ್ಕಿಂತ ಹೆಚ್ಚುವರಿಯಾಗಿ 50 ರೂ.ಗಳನ್ನು ಸಿಬ್ಬಂದಿಗಳು ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಬಸ್ ಪಾಸ್‌ಗೆ ನಿಗಧಿತ ದರವನ್ನಷ್ಟೇ ತೆಗೆದುಕೊಳ್ಳಬೇಕು. ಹೆಚ್ಚಿನ ಹಣ ತೆಗೆದುಕೊಳ್ಳಬಾರದೆಂದು ಪ್ರಶ್ನಿಸಿದವರಿಗೆ ಅಲ್ಲಿನ ಸಿಬ್ಬದಿ ಪ್ರಕಾಶ್‌ ಎಂಬಾತ ಏಕವಚನದಲ್ಲೇ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

50 ರೂಪಾಯಿ ಹೆಚ್ಚಿಗೆ ಹಣ ಯಾಕೆ ತೆಗೆದುಕೊಳ್ಳುತ್ತಿದ್ದೀರಿ ಎಂದು ಪ್ರಶ್ನಿಸಿದವರಿಗೆ, ‘ನೀವು ಯಾರು ಕೇಳುವುದಕ್ಕೆ, ಇದು ನನ್ನ ಕೇಂದ್ರ, ನಾನು ಏನಾದ್ರು ಮಾಡುತ್ತೇನೆ’ ಎಂದು ಪ್ರಕಾಶ್‌ ದಮ್ಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...