ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ : ಪ್ರಕರಣ ದಾಖಲು; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Date:

ಬೀದರ್ ತಾಲೂಕಿನ ಜನವಾಡಾ ಠಾಣೆ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ ಗ್ರಾಮದಲ್ಲಿ ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿರುವ ಘಟನೆ ನಡೆದಿದೆ.

ಡಿ.12ರಂದು ತಡರಾತ್ರಿ ಕಿಡಿಗೇಡಿಗಳು ಬಾಬಾ ಸಾಹೇಬ್‌ರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನಿಸಿದ್ದಾರೆ. ಬೆಳಿಗ್ಗೆ ಗಮನಿಸಿದ ದಲಿತ ಸಮುದಾಯದವರು ಕೃತ್ಯವನ್ನು ತೀವ್ರವಾಗಿ ಖಂಡಿಸಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಅವರನ್ನು ಅವಮಾನಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ವಿಷಯ ತಿಳಿದು ಗ್ರಾಮಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಭೇಟಿ ನೀಡಿ ಪರಿಶೀಲಿಸಿ ಗ್ರಾಮಸ್ಥರೊಂದಿಗೆ ಘಟನೆ ಕುರಿತು ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 12 13 at 7.40.52 PM
ವಿಳಾಸಪುರ ಗ್ರಾಮದಲ್ಲಿ ನಡೆದ ಶಾಂತಿ ಸಭೆ

ಈ ಕುರಿತು ಗ್ರಾಮದ ಪರಿಶಿಷ್ಟ ಸಮುದಾಯದವರು ನೀಡಿದ ದೂರಿನ ಮೇರೆಗೆ ಜನವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದ ಪ್ರಭಾರ ಜಿಲ್ಲಾಧಿಕಾರಿ ಡಾ.ಗಿರೀಶ್‌ ದೋಲೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ್‌ ಮೇಘಣ್ಣನವರ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳು, ದಲಿತ ಸಮುದಾಯದ ಮುಖಂಡರು ಗ್ರಾಮಸ್ಥರೊಂದಿಗೆ ಶಾಂತಿ ಸಭೆ ನಡೆಸಿದ್ದಾರೆ ಎಂದು ಗ್ರಾಮಸ್ಥರು ಈದಿನ.ಕಾಮ್‌ ಗೆ ಮಾಹಿತಿ ನೀಡಿದ್ದಾರೆ.

ಕಿಡಿಗೇಡಿಗಳ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ :

ಬೀದರ್‌ ತಾಲೂಕಿನ ವಿಳಾಸಪುರ ಗ್ರಾಮದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಅವಮಾನಿಸಿರುವ ಘಟನೆಯನ್ನ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಶುಕ್ರವಾರ ಬೀದರ್‌ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼಜಿಲ್ಲೆಯಲ್ಲಿ ಡಾ.ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಅವಮಾನಿಸಿದ ಕೃತ್ಯ ಖಂಡನೀಯವಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಿ ದೇಶ ವಿರೋಧಿ ಕಾಯ್ದೆಯಡಿ ಗಡಿಪಾರು ಮಾಡಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚರಿಕೆಯಿಂದ ಜಿಲ್ಲೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ ಮೂರ್ತಿಗಳ ಬಳಿ ಸಿಸಿ ಕ್ಯಾಮೆರಾ ಅಳವಡಿಸಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಾಹಾರಾಷ್ಟ್ರದ ಪರಭಣಿ ಜಿಲ್ಲೆಯಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪ್ರತಿಮೆ ಹಾಗೂ ಸಂವಿಧಾನಕ್ಕೆ ಅವಮಾನಿಸಿದ ಘಟನೆಗೆ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿ ತೀವ್ರವಾಗಿ ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಪ್ರತಿಮೆ ವಿರೂಪಗೊಳಿಸುವ ಕೃತ್ಯ ಪದೇ ಪದೇ ನಡೆಯುತ್ತಿರುವುದು ಖಂಡನೀಯವಾಗಿದೆ. ಅಂಬೇಡ್ಕರ್‌ ಅವರನ್ನು ಅಪಮಾನಿಸಿದರೆ ಕೋಟ್ಯಾಂತರ ಅನುಯಾಯಿಗಳಿಗೆ ನೋವಾಗಿದೆ. ಇಂತಹ ಹೀನ ಕೃತ್ಯ ನಾವು ಸಹಿಸುವುದಿಲ್ಲ. ಈ ಘಟನೆಯಲ್ಲಿ ಭಾಗವಹಿಸಿದ ಕಿಡಿಗೇಡಿಗಳ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯುವತಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ; ಮದುವೆಯಾಗುತ್ತೇನೆಂದು ವಂಚನೆ

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಅನೀಲ್‌ ಕುಮಾರ್‌ ಬೆಲ್ದಾರ್‌, ರಮೇಶ ಡಾಕುಳಗಿ, ಬಾಬು ಪಾಸ್ವಾನ್‌, ಅಬ್ದುಲ್‌ ಮನ್ನಾನ್‌ ಸೇಠ್‌, ಬಸವರಾಜ ಮಾಳಗೆ, ಶ್ರೀಪತರಾವ್‌ ದೀನೆ, ಶಿವಕುಮಾರ್‌ ನೀಲಿಕಟ್ಟಿ, ಸಂದೀಪ ಕಾಂಟೆ, ಪ್ರದೀಪ ನಾಟೇಕರ್‌, ಸಾಯಿ ಸಿಂಧೆ, ಗೌತಮ್‌ ಪ್ರಸಾದ್‌, ಮಾರುತಿ ಕಂಟಿ, ಬಾಬು ಮಿಠಾರೆ, ಸುನೀಲ ಸಂಗಮ, ಅವಿನಾಶ ದೀನೆ, ಶಾಲಿವಾನ್‌ ಬಡಗೇರ್‌, ಅಂಬಾದಾಸ ಗಾಯಕವಾಡ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...