ಉಡುಪಿ | ಮಲ್ಪೆ ಸರಕಾರಿ ಬಂದರು ಗೂಂಡಾ ರಾಜ್ಯವಾಗುತ್ತಿದೆಯೇ : ಶ್ಯಾಮರಾಜ್ ಬಿರ್ತಿ

Date:

ಸಾವಿರಾರು ಜನರಿಗೆ ಉದ್ಯೋಗ ಮತ್ತು ಅನ್ನ ನೀಡುತ್ತಿರುವ ಸರಕಾರಿ ಮಲ್ಪೆ ಬಂದರು, ಕೆಲ ಬಲಾಡ್ಯರ ಗೂಂಡಾ ಪ್ರಭಾವಕ್ಕೆ ಒಳಗಾಗುತ್ತಿರುವುದೇ ಎಂಬ ಗಂಭೀರ ಅನುಮಾನ ಮೂಡುತ್ತಿದೆ. ಉಳಿದವರಿಗೆ ಒಂದು ಕಾನೂನು ಇದ್ದರೆ, ಬಂದರಿನ ಒಳಗೆ ಮಾತ್ರ ಮಾಲಿಕರು ತಾವೇ ನ್ಯಾಯ ತೀರಿಸುವ ತಮ್ಮದೇ ರೀತಿಯ ಪರಿಪಾಠ ಬೆಳೆಸಿಕೊಂಡಿರುವಂತ ಸ್ಥಿತಿ ನಿರ್ಮಾಣವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಕಳೆದ ವರ್ಷ ಬಂದರಿನೊಳಗೆ ಕೂಲಿ ಕೆಲಸ ಮಾಡುತ್ತಿದ್ದ ಬಡ ಮಹಿಳಾ ಕಾರ್ಮಿಕಳನ್ನು ಮರಕ್ಕೆ ಕಟ್ಟಿ ಥಳಿಸಿದ ಅಮಾನುಷ ಘಟನೆ ಇನ್ನೂ ಜನಮನದಲ್ಲಿ ಮಾಸುವ ಮೊದಲೇ, ಇದೀಗ ಮೀನು ಏಲಂ ಕೆಲಸ ಮಾಡುತ್ತಿದ್ದ ಶೇಖ್ ಅಯ್ಯೂಬ್ ಅವರ ಮೇಲೆ ಬಂದರಿನ ಒಳಗೇ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಪುನರಾವರ್ತನೆಯಾಗಿದೆ.

ಈ ರೀತಿಯ ಘಟನೆಗಳಿಗೆ ಮುಖ್ಯ ಕಾರಣ ಕಾನೂನಿನ ಭಯವಿಲ್ಲದ ಮನೋಭಾವ ಮತ್ತು “ಏನೂ ಮಾಡಿದರೂ ನಮ್ಮ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎನ್ನುವ ಅಹಂಕಾರವೇ ಆಗಿದೆ. ಮಲ್ಪೆ ಬಂದರಿನಲ್ಲಿ ನಡೆಯುವ ಬಹುತೇಕ ಪ್ರಕರಣಗಳು ಪೋಲೀಸ್ ಠಾಣೆ ಮಟ್ಟಕ್ಕೆ ತಲುಪುವುದೇ ಇಲ್ಲ. ಒಂದು ವೇಳೆ ಪ್ರಕರಣಗಳು ಠಾಣೆಗೆ ತಲುಪಿದರೂ, ಸಂತ್ರಸ್ತರನ್ನು ಹೆದರಿಸಿ-ಬೆದರಿಸಿ ಕೇಸು ಹಿಂಪಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಸಾಕ್ಷಿಯಂತೆ, ಬಂದರಿನೊಳಗೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ, ರಾಜಕೀಯ ಜನಪ್ರತಿನಿಧಿಯೇ ಮುಂದಾಗಿ ಮೆರವಣಿಗೆ ನಡೆಸಿ, ಸಂತ್ರಸ್ತ ಮಹಿಳೆಯಿಂದಲೇ ಕೇಸು ವಾಪಾಸು ಪಡೆಯುವಂತೆ ಮನವಿ ಸಲ್ಲಿಸಿದ ಘಟನೆ ಸಾರ್ವಜನಿಕವಾಗಿ ನಡೆದಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ.

“ಬೇಲಿಯೇ ಎದ್ದು ಹೊಲ ಮೇಯ್ದಂತೆ” ಎಂಬ ಸ್ಥಿತಿ ನಿರ್ಮಾಣವಾದರೆ, ಹೊಟ್ಟೆಪಾಡಿಗಾಗಿ ಮಲ್ಪೆ ಬಂದರಿನಲ್ಲಿ ದುಡಿಯುವ ಸಾವಿರಾರು ಕೂಲಿ ಕಾರ್ಮಿಕರ ಭವಿಷ್ಯವೇನು ಎಂಬ ಪ್ರಶ್ನೆ ಎದುರಾಗುತ್ತದೆ.

ಹೀಗಾಗಿ, ಮಲ್ಪೆ ಬಂದರಿನೊಳಗೆ ನಿರಂತರ ಪೊಲೀಸ್ ಗಸ್ತು ವ್ಯವಸ್ಥೆ ಕಲ್ಪಿಸಿ, ಸಮುದ್ರದಲ್ಲಿಯೂ ಬಂದರಿನಲ್ಲಿಯೂ ಜೀವಪಣವಾಗಿ ದುಡಿಯುವ ಉತ್ತರ ಪ್ರದೇಶ, ಬಿಹಾರ ಹಾಗೂ ಇತರ ಹೊರರಾಜ್ಯಗಳ ಕೂಲಿ ಕಾರ್ಮಿಕರಿಗೆ ಭದ್ರತೆ ಒದಗಿಸಬೇಕು. ಅಲ್ಲದೆ, ಹಲ್ಲೆ ನಡೆಸಿದವರ ಮೇಲೆ ಯಾವುದೇ ರಾಜಕೀಯ ಒತ್ತಡಕ್ಕೂ ಮಣಿಯದೇ ಪ್ರಕರಣ ದಾಖಲಿಸಿ, ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...